ರಾಯಚೂರು: ಲಿಂಗಸುಗೂರು, ಮಸ್ಕಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ 15 ನಿಮಿಷ ಸಾಧಾರಣ ಮಳೆಯಾಗಿದೆ.
40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಿಂದಾಗಿ ಸುಸ್ತಾಗಿದ್ದ ಪಟ್ಟಣದ ಜನತೆಗೆ ಮಳೆ ತಂಪೆರಚಿತು. ಸಂಜೆ ಭಾರಿ ಗಾಳಿ ಹಾಗೂ ಗುಡುಗು ಸಹಿತ ತುಂತುರು ಮಳೆ ಸುರಿಯಿತು. ರಸ್ತೆ ಮೇಲೆ ಮಳೆ ನೀರು ಹರಿಯಿತು. ಸೆಕೆಯಿಂದ ಬೇಸತ್ತಿದ್ದ ಕೆಲವರು ಮಳೆಯಲ್ಲಿ ತೊಯ್ಯಿಸಿಕೊಂಡು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.