ADVERTISEMENT

ಚಿನ್ನದ ಗಣಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 14:21 IST
Last Updated 3 ಜುಲೈ 2024, 14:21 IST
ಹಟ್ಟಿ ಚಿನ್ನದ ಗಣಿ‌ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಎಐಟಿಯುಸಿ ಹಾಗೂ ಸಿಬ್ಬಂದಿ‌ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಹಟ್ಟಿ ಚಿನ್ನದ ಗಣಿ‌ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಎಐಟಿಯುಸಿ ಹಾಗೂ ಸಿಬ್ಬಂದಿ‌ ಹಾಗೂ ಕಾರ್ಮಿಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಹಟ್ಟಿ ಚಿನ್ನದ ಗಣಿ: ಕಾರ್ಮಿಕರ ವಿವಿಧ  ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಎಐಟಿಯುಸಿ ಮತ್ತು ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಹಟ್ಟಿ ಪಟ್ಟಣದ ಸುತ್ತಮುತ್ತಲಿನ ಪ್ರದೇಶದ ಯುವಕರನ್ನು ಕ್ಯಾಷ್ಯುವೆಲ್ ಟ್ರೇನಿ ಎಂದು ನೇಮಕ ಮಾಡಿಕೊಳ್ಳಬೇಕು. ಹಟ್ಟಿ ಪಟ್ಟಣದ ಸುತ್ತಲಿನ 14 ನಿಕ್ಷೇಪ ಇರುವ ಬ್ಲಾಕ್‌ ಪ್ರಾರಂಭವಾದರೆ ಉದ್ಯೋಗ ಅವಕಾಶ ಈ ಭಾಗದ ಜನರಿಗೆ ಉದ್ಯೋಗ ಸಿಗಲಿದೆ.  ಅದಕ್ಕಾಗಿ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ಹೊರಗುತ್ತಿಗೆ ಪದ್ಧತಿಯಿಂದ ಸ್ದಳೀಯರಿಗೆ ಅನ್ಯಾಯ ಆಗುತ್ತಿದೆ. ಹಾಗಾಗಿ ಸರ್ಕಾರ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ  ಮಾಡಿದ್ದಾರೆ.

ADVERTISEMENT

ಈ ವೇಳೆ ಸಿಬ್ಬಂದಿ‌ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಎಂ.ಶಫಿ, ಎಐಟಿಯುಸಿ ಸಂಘದ ಅಧ್ಯಕ್ಷ ಶಾಂತಪ್ಪ ಆನ್ವರಿ ಪದಾಧಿಕಾರಿಗಳಾದ ಸಿದ್ದಪ್ಪ ಮುಡಂರಗಿ, ಮೌನುದ್ದಿನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.