ದೇವದುರ್ಗ: ತಾಲ್ಲೂಕಿನ ಬೆಣಕಲ್ ಗ್ರಾಮದಲ್ಲಿ ಮರಳು ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ತಾಲ್ಲೂಕು ಮರಳು ಮೇಲ್ವಿಚಾರಣೆ ಸಮಿತಿ ಅಧಿಕಾರಿಗಳು ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿ 6 ಹಿಟಾಚಿ, 2 ಟಿಪ್ಪರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಯಚೂರು ಉಪವಿಭಾಗಾಧಿಕಾರಿ ಮೆಹಬೂಬಿ ಅವರು ನೇತೃತ್ವದಲ್ಲಿ ಮರಳು ಮೇಲ್ವಿಚಾರಣೆ ಸಮಿತಿಯ ನಿರ್ಧಾರದಂತೆ ಕಾರ್ಯಾಚರಣೆ ನಡೆಸಲಾಗಿದೆ.
‘ವಶಕ್ಕೆ ಪಡೆದ ಹಿಟಾಚಿ ಮತ್ತು ಟಿಪ್ಪರ್‌ಗಳನ್ನು ಗಣಿ ಮತ್ತು ಭೂ ವಿಜ್ಞಾನಿ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯಾವುದೇ ಪ್ರಕರಣ ದಾಖಲಾಗಿಲ್ಲ. ಆರ್‌ಟಿಒ ವರದಿ ಬಂದ ನಂತರ ಪ್ರಕರಣ ದಾಖಲಿಸಲಾಗುವುದು’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪುಷ್ಪಲತಾ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.