ADVERTISEMENT

‘ಆಶುಕವಿಗಳಲ್ಲಿ ಕವಿ ಸರ್ವಜ್ಞ ಮೊದಲಿಗರು’

ರಾಯಚೂರು ಉ‍ಪ ವಿಭಾಗಾಧಿಕಾರಿ ಎಸ್.ಎಸ್. ಸಂಪಗಾವಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 7:20 IST
Last Updated 21 ಫೆಬ್ರುವರಿ 2024, 7:20 IST
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು   

ರಾಯಚೂರು: ‘ಜಗತ್ತಿನ ಬೆರಳೆಣಿಕೆಯಷ್ಟು ಆಶುಕವಿಗಳಲ್ಲಿ ಸಂತಕವಿ ಸರ್ವಜ್ಞ ಮೊದಲಿಗರಾಗಿದ್ದಾರೆ’ ಎಂದು ರಾಯಚೂರು ಉ‍ಪ ವಿಭಾಗಾಧಿಕಾರಿ ಎಸ್.ಎಸ್. ಸಂಪಗಾವಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

‘ಸರ್ವಜ್ಞ ಅವರು ತ್ರಿಪದಿಗಳ ಮೂಲಕ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸಿದ್ದಾರೆ. ಸರ್ವಜ್ಞ ಅವರು 1000ಕ್ಕೂ ಹೆಚ್ಚು ತ್ರಿಪದಿಗಳನ್ನು ರಚಿಸಿದ್ದಾರೆ. ತ್ರಿಪದಿಗಳ ಮೂಲಕ ಅರಿವು ಮೂಡಿಸುವ ಮತ್ತು ಅನುಭವ ಹಂಚಿಕೊಳ್ಳುವ ಕಾರ್ಯ ಮಾಡಿದ್ದಾರೆ. ಜ್ಞಾನದಿಂದ ಸುಖ ಸಂತೋಷಗಳನ್ನು ಕಾಣಬಹುದಾಗಿದೆ ಎಂಬ ಸಂದೇಶ ನೀಡಿದ್ದಾರೆ’ ಎಂದು ತಿಳಿಸಿದರು.

ADVERTISEMENT

ತಹಶೀಲ್ದಾರ್ ಸುರೇಶ ವರ್ಮಾ ಮಾತನಾಡಿ, ‘ಸರ್ವಜ್ಞ ಕವಿ ತಮ್ಮ ತ್ರಿಪದಿಗಳ ಮೂಲಕ ಸಮಾಜವನ್ನು ಬಡಿದೆಬ್ಬಿಸಿದ್ದಾರೆ. ಅವರ ತ್ರಿಪದಿಗಳು ಬದುಕಿಗೆ ಮಾರ್ಗದರ್ಶನವಾಗಿದೆ‘ ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯ ವೈ.ಸುರೇಂದ್ರಬಾಬು ಉಪನ್ಯಾಸ ನೀಡಿ, ‘16ನೇ ಶತಮಾನದ ಶ್ರೇಷ್ಠ ಕವಿಗಳಲ್ಲೊಬ್ಬರಾದ ಸರ್ವಜ್ಞರು ಮೂರು ಸಾಲುಗಳಲ್ಲಿ ಅರ್ಥಪೂರ್ಣ ವಚನಗಳನ್ನು ನೀಡಿದ್ದಾರೆ. ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ’ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದವರೆಗೆ ಸಂತಕವಿ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಗಲಾ ನಾಯಕ, ಸಮಾಜದ ಮುಖಂಡರಾದ ಚೆನ್ನಣ್ಣಗೌಡ, ರಾಮು, ಶಿವರಾಜಪ್ಪ, ವೀರಭದ್ರಪ್ಪ, ಭೀಮಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.