ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ರಥ ಮುಟ್ಟಿದ ಕಾರಣಕ್ಕೆ ಪರಿಶಿಷ್ಟ ಜಾತಿಯ ಯುವಕರ ಮೇಲೆ ಲಿಂಗಾಯತ ಸಮುದಾಯದ ಯುವಕರು ಹಲ್ಲೆ ಮಾಡಿದ ಘಟನೆ ನಡೆದು ಎರಡು ವಾರಗಳಾಗಿವೆ. ಹಲವು ಬಾರಿ ಸಂಧಾನಕ್ಕೆ ಪ್ರಯತ್ನಿಸಿದರೂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ಅಘೋಷಿತ ಬಹಿಷ್ಕಾರ ಕೊನೆಗೊಂಡಿಲ್ಲ.
‘ಗಿರಣಿ ಅಂಗಡಿಯಲ್ಲಿ ಹಿಟ್ಟು ಹಾಕುವುದಿಲ್ಲ, ಕಿರಾಣಿ ಅಂಗಡಿಯಲ್ಲಿ ವಸ್ತುಗಳನ್ನು ನೀಡುವುದಿಲ್ಲ, ಹೋಟೆಲ್‌ನಲ್ಲಿ ಚಹಾ ಕುಡಿಯಲು ಕೂಡ ನಿರ್ಬಂಧಿಸಲಾಗಿದೆ’ ಎಂದು ಪರಿಶಿಷ್ಟ ಜಾತಿಯವರುಸಮಸ್ಯೆ ತೋಡಿಕೊಂಡರು. ಅಧಿಕಾರಿಗಳು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ, ಬಿಗುವಿನ ಪರಿಸ್ಥಿತಿ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.