ADVERTISEMENT

ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ- ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ

ಮಾನ್ವಿ: ವಿಜ್ಞಾನ, ಕರಕುಶಲ ವಸ್ತುಗಳ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 7:23 IST
Last Updated 9 ಮಾರ್ಚ್ 2022, 7:23 IST
ಮಾನ್ವಿ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಮಕ್ಕಳು ಗ್ರಾಮೀಣ ಸೊಗಡು ಬಿಂಬಿಸಿದ್ದು ಹೀಗೆ
ಮಾನ್ವಿ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಮಕ್ಕಳು ಗ್ರಾಮೀಣ ಸೊಗಡು ಬಿಂಬಿಸಿದ್ದು ಹೀಗೆ   

ಮಾನ್ವಿ: ‘ಅಕ್ಷರಾಭ್ಯಾಸದ ಜತೆಗೆ ಪರಿಣಾಮಕಾರಿ ಬೋಧನೆ ಹಾಗೂ ಕ್ರಿಯಾಶೀಲ ಚಟುವಟಿಕೆಗಳ ಮೂಲಕ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ’ ಎಂದು ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ಮಂಗಳವಾರ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಜ್ಞಾನ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

‘2 ದಶಕಗಳಿಂದ ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ ನೇತಾಜಿ ಸಂಸ್ಥೆಯ ಕಾರ್ಯಕ್ರಮ ಶ್ಲಾಘನೀಯ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ವಿವಿಧ ಕ್ಷೇತ್ರಗಳ ಸಾಧಕರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನೇತಾಜಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ವಿಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ, ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಎಚ್.ಶರ್ಪುದ್ದೀನ್ ಪೋತ್ನಾಳ, ಇತರ ಪದಾಧಿಕಾರಿಗಳಾದ ಶ್ರೀನಿವಾಸ, ಬಿ.ವಿ.ರೆಡ್ಡಿ, ಡಿ.ವಿ.ಪ್ರಕಾಶ, ರಾಜು ತಾಳಿಕೋಟಿ, ಪ್ರಭಯ್ಯ ಸ್ವಾಮಿ, ರಾಜಾ ಸುಭಾಸ್‌ಚಂದ್ರ ನಾಯಕ, ಹಿರಿಯ ಪತ್ರಕರ್ತರಾದ ಪಿ.ಪರಮೇಶ ಹಾಗೂ ಶರಣಬಸವ ನೀರಮಾನ್ವಿ, ಮಂಜುನಾಥ ಕಮತರ್, ಸಲಾವುದ್ದೀನ್ ಗುತ್ತೇದಾರ, ಜಗನ್ನಾಥ ಚೌದರಿ, ಎಸ್.ಭೀಮರಾಯ ಇದ್ದರು.

ಪ್ರದರ್ಶನದಲ್ಲಿ ಕೃಷಿ, ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ 250ಕ್ಕೂ ಅಧಿಕ ಮಾದರಿಗಳು ಇದ್ದವು. ಮಹಾತ್ಮ ಗಾಂಧೀಜಿ ಹಾಗೂ ಗ್ರಾಮೀಣ ಸೊಗಡು ಬಿಂಬಿಸುವ ವೇಷಧಾರಿ ಮಕ್ಕಳು ಗಮನ ಸೆಳೆದರು. ವ್ಯಂಗ್ಯಚಿತ್ರಕಾರ ಈರಣ್ಣ ಬೆಂಗಾಲಿ ಅವರು ಪರಿಸರ ಸಂರಕ್ಷಣೆ ಕುರಿತು ಜಾಗೃತಿy ಚಿತ್ರಗಳನ್ನು ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.