ADVERTISEMENT

ಸಿಂಧನೂರು: ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಯಲಕ್ಕೆ ಕೇಂದ್ರ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 12:25 IST
Last Updated 25 ಜುಲೈ 2024, 12:25 IST
ಸಿಂಧನೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಲ್ಲೂಕು ಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಗುರುವಾರ ಕೇಂದ್ರ ಸರ್ಕಾರದ ರಾಷ್ಟಿçÃಯ ಜಲಜೀವನ್ ಮಿಷನ್ ವಾಶ್ ಎಕ್ಸ್ಫರ್ಟ್ನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು
ಸಿಂಧನೂರಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಲ್ಲೂಕು ಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಗುರುವಾರ ಕೇಂದ್ರ ಸರ್ಕಾರದ ರಾಷ್ಟಿçÃಯ ಜಲಜೀವನ್ ಮಿಷನ್ ವಾಶ್ ಎಕ್ಸ್ಫರ್ಟ್ನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು   

ಸಿಂಧನೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಲ್ಲೂಕು ಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಕ್ಕೆ ಗುರುವಾರ ಕೇಂದ್ರ ಸರ್ಕಾರದ ರಾಷ್ಟ್ರೀಯ ಜಲಜೀವನ್ ಮಿಷನ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೇಂದ್ರ ತಂಡದ ಜಗಜಿತ್ ಸಿಂಗ್ ಸೌದಿ, ದೇವೇಶ್ ಕುಮಾರ್ ಭಾರಧ್ವಾಜ್ ಅವರು ಭೇಟಿ ನೀಡಿ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಪರೀಕ್ಷೆ ಮಾಡುತ್ತಿರುವ ಕುರಿತು ಪರಿಶೀಲನೆ ಮಾಡಿದರು.

ಪ್ರಸ್ತುತ ದಿನಗಳಲ್ಲಿ ಕಲುಷಿತ ನೀರಿನ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದರು.

ADVERTISEMENT

ಗ್ರಾಮ ನೀರು ನೈರ್ಮಲ್ಯ ಸಮಿತಿಯ ರಚನೆ ಮತ್ತು ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಿದರು. ತದನಂತರ ಕುಡಿಯುವ ನೀರಿನ ಗುಣಮಟ್ಟದ ಕುರಿತು ಪೇಲ್ಡ್ ಪರೀಕ್ಷಾ ಕಿಟ್ ಬಳಕೆ ಕುರಿತು ಪರೀಕ್ಷೆ ಮಾಡಿದರು. ಮನೆ-ಮನೆಗೆ ನಳ, ವೈಯಕ್ತಿಕ ಶೌಚಾಲಯ, ಶಾಲಾ, ಅಂಗನವಾಡಿ ಶೌಚಾಲಯ ಕುರಿತು ಮಾಹಿತಿ ಪಡೆದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ವಿನೋದ್ ಕುಮಾರ್ ಗುಪ್ತಾ, ವಿಜಯಲಕ್ಷ್ಮಿ, ಜಿಲ್ಲಾ ಯೋಜನಾ ವ್ಯವಸ್ಥಾಪಕ ಬಸವರಾಜ ಗಲಗಿನ್, ಜೆಇ ಮಂಜುನಾಥ, ಮೌನೇಶ್, ಅಜರುದ್ಧೀನ್, ಇಸ್ರೋ ತಂಡದ ನಾಯಕ ಶಾಂತಮುತ್ತಯ್ಯ ಗುರುವಿನ್, ಮೌನೇಶ ಬಡಿಗೇರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಿರಿಯ ಎಂಜನಿಯರ್ ಧನರಾಜ್ ಹಾಗೂ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.