ADVERTISEMENT

ವಿಧಾನ ಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಪದಗ್ರಹಣ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 15:08 IST
Last Updated 11 ಜುಲೈ 2024, 15:08 IST
ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು
ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು   

ಸಿಂಧನೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಸ್ಪರ್ಧಿಸಿದ್ದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಕೆ.ಎಚ್.ಮುನಿಯಪ್ಪ, ಎನ್.ಎಸ್.ಭೋಸರಾಜು, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ರಾಯಚೂರು ಜಿಲ್ಲೆಯ ಜನಪ್ರತಿನಿಧಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.