ಮಸ್ಕಿ: ಪಟ್ಟಣದ ವೆಂಕಟಾಪೂರ ರಸ್ತೆಯಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೆ ನೀರಾವರಿ ನಿಗಮ ನೀಡಿದ ಜಮೀನನ್ನು ತಹಶೀಲ್ದಾರ್ ಮಲ್ಲಪ್ಪ ಯರಗೋಳ ಬುಧವಾರ ಪರಿಶೀಲಿಸಿದರು.
‘ಮಿನಿವಿಧಾನಸೌಧ ನಿರ್ಮಾಣಕ್ಕೆ ಸರ್ಕಾರ ₹10 ಕೋಟಿ ನೀಡಿದೆ. ಉಳಿದ ಹಳವನ್ನು ಶಾಸಕರು ಕೆಕೆಆರ್‌ಡಿಬಿ ಅನುದಾನದಲ್ಲಿ ಒದಗಿಸಲಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಟ್ಟಡ ನೀಲ ನಕ್ಷೆ ತಯಾರಿಸಿದ್ದು ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ಪ್ರಜಾವಾಣಿಗೆ ತಿಳಿಸಿದ್ದಾರೆ.
‘ಆದಷ್ಟು ಬೇಗ ಭೂಮಿಪೂಜೆ ನೇರವೇರಿಸುವ ಸಂಬಂಧ ಶಾಸಕರು ಸರ್ಕಾರದ ಜತೆ ಮಾತುಕತೆ ನಡೆಸಿ ತಿರ್ಮಾನ ಕೈಗೊಳ್ಳಲಿದ್ದಾರೆ. ತಾಲ್ಲೂಕು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೂ ನೀರಾವರಿ ನಿಗಮಕ್ಕೆ ಸೇರಿದ ಜಾಗೆಯಲ್ಲಿ ಸ್ಥಳದ ಅವಕಾಶ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ನಿಗಮದ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ’ ಎಂದು ಅವರು ತಿಳಿಸಿದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ, ನೀರಾವರಿ ಇಲಾಖೆಯ ಕೆ.ಮಲ್ಲಯ್ಯ, ಕಂದಾಯ ನಿರೀಕ್ಷಕ ಶರಣೇಗೌಡ ಸೇರಿದಂತೆ ಕಂದಾಯ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.