ADVERTISEMENT

ಮಂತ್ರಾಲಯ: ಶ್ರೀಗುರುರಾಯರ ಪಟ್ಟಾಭಿಷೇಕ ಮಹೋತ್ಸವ ಆರಂಭ 

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2023, 7:03 IST
Last Updated 22 ಫೆಬ್ರುವರಿ 2023, 7:03 IST
ಮಂತ್ರಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 402ನೇ ಪಟ್ಟಾಭಿಷೇಕ ಮಹೋತ್ಸವ ಸಂಭ್ರಮ ಸಡಗರದಿಂದ ಆರಂಭವಾಗಿದೆ.
ಮಂತ್ರಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 402ನೇ ಪಟ್ಟಾಭಿಷೇಕ ಮಹೋತ್ಸವ ಸಂಭ್ರಮ ಸಡಗರದಿಂದ ಆರಂಭವಾಗಿದೆ.   

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 402ನೇ ಪಟ್ಟಾಭಿಷೇಕ ಮಹೋತ್ಸವ ಸಂಭ್ರಮ ಸಡಗರದಿಂದ ಆರಂಭವಾಗಿದೆ.

ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ರಾಯರ ಪಾದಕಗಳಿಗೆ ಪುಷ್ಪ ಸಮರ್ಪಿಸಿ, ಅರ್ಚನೆ ಮಾಡಿ ಕನಕಾಭಿಷೇಕ ನೆರವೇರಿಸಿದರು. ಆನಂತರ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

ಫೆಬ್ರುವರಿ 26 ರವರೆಗೂ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಧಾರ್ಮಿಕ ಉಪನ್ಯಾಸಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

26 ರಂದು ರಾಯರ 428ನೇ ವರ್ಧಂತಿ ಉತ್ಸವದ ಮೂಲಕ ಗುರು ವೈಭವೋತ್ಸವ ಕಾರ್ಯಕ್ರಮಗಳು ಸಂಪನ್ನವಾಗಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.