ADVERTISEMENT

ಶಾಲಾ ಕೊಠಡಿ ಕಾಮಗಾರಿ ವಿಳಂಬ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 9:27 IST
Last Updated 7 ನವೆಂಬರ್ 2024, 9:27 IST
   

ಲಿಂಗಸುಗೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಮಾವಿನಭಾವಿ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣ ವಿಳಂಬ ಧೋರಣೆ ವಿರೋಧಿಸಿ ಮಕ್ಕಳ ಸಮೇತ ಪಾಲಕರು ಪ್ರತಿಭಟನೆ ನಡೆಸಿದರು.

ಗುರುವಾರ ದಿಢೀರ್ ಪ್ರತಿಭಟನೆ ನಡೆಸಿ ಶಾಲಾ ಮುಖ್ಯದ್ವಾರ ಬಂದ್ ಮಾಡಿ ಶಿಕ್ಷಕರನ್ನು ಹೊರಗಡೆ ನಿಲ್ಲಿಸಿ, ಆಡಳಿತ ವ್ಯವಸ್ಥೆ ವಿರುದ್ಧ ಧಿಕ್ಕಾರ ಕೂಗಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಡಿ 2020-21ರಲ್ಲಿ ₹ 54ಲಕ್ಷ ವೆಚ್ಚದಲ್ಲಿ 5 ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ, ಕೇವಲ ಮೂರು ಕೊಠಡಿಗಳನ್ನು ನಿರ್ಮಿಸಲಾಗಿದೆ. ಉಳಿದೆರಡು ಕೊಠಡಿಗಳ ಕಾಮಗಾರಿಯನ್ನೂ ಆರಂಭಸಿಲ್ಲ ಎಂದು ಪಾಲಕ ರುದ್ರಗೌಡ ಮಾವಿನಭಾವಿ ಆರೋಪಿಸಿದರು.

ADVERTISEMENT

ಕೊಠಡಿಗಳು ಇಲ್ಲದ ಕಾರಣ ವಿದ್ಯಾರ್ಥಿಗಳ ಕಲಿಕೆ ತೊಂದರೆಯಾಗುತ್ತಿದೆ. ಆದರೆ, ಮಕ್ಕಳ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.