ADVERTISEMENT

ಯಲಗಟ್ಟಾ: ಮುಖ್ಯಶಿಕ್ಷಕರ ಅಮಾನತಿಗೆ ಪಟ್ಟು

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 14:06 IST
Last Updated 22 ಜೂನ್ 2024, 14:06 IST
ಯಲಗಟ್ಟಾ ಸರ್ಕಾರಿ ಪ್ರೌಢ ಶಾಲೆಗೆ ನಿರಂತರ ಗೈರಾಗುತ್ತಿರುವ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಬೇಕೆಂದು ಹಮ್ಮಿಕೊಂಡಿರುವ ಪ್ರತಿಭಟನಾ ಸ್ಧಳಕ್ಕೆ ಡಿಡಿಪಿಐ ಕೆ.ಡಿ. ಬಡಿಗೇರ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವಿ ಪತ್ರ ಪಡೆದರು
ಯಲಗಟ್ಟಾ ಸರ್ಕಾರಿ ಪ್ರೌಢ ಶಾಲೆಗೆ ನಿರಂತರ ಗೈರಾಗುತ್ತಿರುವ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಬೇಕೆಂದು ಹಮ್ಮಿಕೊಂಡಿರುವ ಪ್ರತಿಭಟನಾ ಸ್ಧಳಕ್ಕೆ ಡಿಡಿಪಿಐ ಕೆ.ಡಿ. ಬಡಿಗೇರ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವಿ ಪತ್ರ ಪಡೆದರು   

ಹಟ್ಟಿಚಿನ್ನದಗಣಿ: ಯಲಗಟ್ಟಾ ಗ್ರಾಮದ ಸರ್ಕಾರಿ ಶಾಲೆಗೆ ನಿರಂತರವಾಗಿ ಗೈರಾಗುತ್ತಿರುವ ಮುಖ್ಯಶಿಕ್ಷಕರನ್ನು ಅಮಾನತು ಮಾಡುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಎಸ್ಎಫ್ಐ ಸಂಘಟನೆ ಜಿಲ್ಲಾಧ್ಯಕ್ಷ ರಮೇಶ ಹೇಳಿದರು.

ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಶನಿವಾರ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಮೂಲ ಸೌಕರ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನಾ ಸ್ಧಳಕ್ಕೆ ಡಿಡಿಪಿಐ ಕೆ.ಡಿ. ಬಡಿಗೇರ ಆಗಮಿಸಿ ಸಮಸ್ಯೆಯನ್ನು ಆಲಿಸಿದರು. ಮುಖ್ಯಗುರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಲಾಗುವುದು. ಶಿಕ್ಷಕರ ಕೊರತೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಿಕೊಡಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ, ಶಿಕ್ಷಣ ಸಂಯೋಜಕ ಬಸವರಾಜ ಕರಡಿ, ಬಿಆರ್‌ಸಿ ಮುಸ್ತಾಫಾ, ಚನ್ನಬಸವ ಮೇಟಿ, ಸಂಧಾನ ಮಾಡಿದರು. ನಮ್ಮ ಸಮಸ್ಯೆ ಬಗೆಹರಿಯುವವರೆಗೂ ಧರಣಿಯನ್ನು ಮುಂದುವರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಸ್ಧಳದಿಂದ ಅಧಿಕಾರಿಗಳು ವಾಪಾಸ್ಸಾಗಿದ್ದಾರೆ.

ಎಸ್ಎಫ್ಐ ಸಂಘಟನೆಯ ಪದಾಧಿಕಾರಿಗಳಾದ ಪವನ್, ಕಮದಾಳ, ವಿನಯಕುಮಾರ, ಮಹಾಲಿಂಗ, ಬಸವರಾಜು, ಒಡಿಕೇಶ, ಶ್ರೀನಿವಾಸ, ಕರಿಯಪ್ಪ, ವಿನೋದರಾಜ್, ಕರುನಾಡ ವಿಜಯ ಸೇನೆ ಅಧ್ಯಕ್ಷ ಶಿವಶಂಕರ, ಕರ್ನಾಟಕ ಗ್ರಾಮ ಘಟಕ ಅಧ್ಯಕ್ಷ ಅಣ್ಣರಾಯ, ಕರವೇ ಅಧ್ಯಕ್ಷ ರಾಜು ನಾಯಕ, ಬಸವರಾಜು, ಅಮರೇಶ, ವೆಂಕಣ್ಣ, ಶಿವು ಸೇರಿದಂತೆ ಪಾಲಕರು ಹಾಗೂ ಗ್ರಾಮಸ್ಧರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.