ಸಿರವಾರ: ತಾಲ್ಲೂಕಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಸರ್ಕಾರಿ ಶಾಲೆಗಳಲ್ಲಿ ಫಾಗಿಂಗ್ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿಗೆ ಬುಧವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.
‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಕೈಗೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಟಿಎಚ್‌ಒಗೆ ಬರೆದ ಮನವಿಯಲ್ಲಿ ಒತ್ತಾಯಿಸಲಾಗಿದೆ.
‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಸ್ವಚ್ಛತೆ ಕೊರತೆಯಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಿದ್ದು, ವಾರಕ್ಕೆರಡು ಬಾರಿ ಫಾಗಿಂಗ್ ಮಾಡಿಸಬೇಕು. ಈ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಬರೆದ ಮನವಿ ಪತ್ರದಲ್ಲಿ ಕೊರಲಾಗಿದೆ.
ಮನವಿ ಸಲ್ಲಿಕೆ ವೇಳೆ ತಾಲ್ಲೂಕು ಸಂಚಾಲಕ ಶಾಂತಪ್ಪ ಪಿತಗಲ್, ಶಂಕರ ಮರಾಟ, ಚನ್ನಬಸವ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.