ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಆಕನಾಳ-ಉಪನಾಳ ಗ್ರಾಮದಲ್ಲಿ ದಲಿತ ಕಾಲೊನಿಗೆ ಮೂಲ ಸೌಲಭ್ಯ ಕಲ್ಪಿಸಿಲ್ಲ ಎಂದು ಪರಿಶಿಷ್ಟ ಜಾತಿ ಸಮುದಾಯದವರು ಚುನಾವಣೆ ಬಹಿಷ್ಕಾರ ಮಾಡಿದರು.
ಕಾಲೊನಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಿಲ್ಲ. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಲ್ಲ. ಶೌಚಾಲಯ ಸೌಲಭ್ಯ ಇಲ್ಲ. ಚರಂಡಿ ಸೌಲಭ್ಯ ಇಲ್ಲ. ಎಲ್ಲಿ ಅಂದ್ರೆ ಅಲ್ಲಿ ವಿದ್ಯುತ್ ತಂತಿ ಜೋತು ಬಿದ್ದಿವೆ.
ಹೀಗಾಗಿ ಮೂಲ ಸೌಲಭ್ಯ ಕಲ್ಪಿಸುವರಿಗೆ ಯಾವುದೆ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ ಎಂದು ಬಹಿಷ್ಕಾರ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.