ADVERTISEMENT

ಸಿಂಧನೂರು | ನಿರ್ಲಕ್ಷ್ಯ ವಹಿಸಿದರೆ ಸಿಎಂ ಕಾರ್ಯಕ್ರಮದಲ್ಲಿ ಪ್ರತಿಭಟನೆ; ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2023, 15:20 IST
Last Updated 28 ಡಿಸೆಂಬರ್ 2023, 15:20 IST
ಸಿಂಧನೂರು ತಾಲ್ಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ವಸತಿ ಮತ್ತು ನಿವೇಶನ ಹಕ್ಕು ಪತ್ರಕ್ಕಾಗಿ ಕರ್ನಾಟಕ ರೈತ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯು ಗುರುವಾರ 120 ದಿನಕ್ಕೆ ಕಾಲಿಟ್ಟಿದೆ
ಸಿಂಧನೂರು ತಾಲ್ಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ವಸತಿ ಮತ್ತು ನಿವೇಶನ ಹಕ್ಕು ಪತ್ರಕ್ಕಾಗಿ ಕರ್ನಾಟಕ ರೈತ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯು ಗುರುವಾರ 120 ದಿನಕ್ಕೆ ಕಾಲಿಟ್ಟಿದೆ   

ಸಿಂಧನೂರು: ತಾಲ್ಲೂಕಿನ ಬೂದಿವಾಳ ಕ್ಯಾಂಪಿನ ಸರ್ವೆ ನಂ.71ರ ಸರ್ಕಾರಿ ಭೂಮಿಯಲ್ಲಿ ವಸತಿ ಮತ್ತು ನಿವೇಶನ ಹಕ್ಕುಪತ್ರಕ್ಕಾಗಿ ಕರ್ನಾಟಕ ರೈತ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ 120 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸಿಲ್ಲ. ಈಗಲೂ ನಿರ್ಲಕ್ಷ್ಯ ವಹಿಸಿದರೆ ಡಿ.30 ರಂದು ಸಿಂಧನೂರಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಪ್ರತಿಭಟನೆ ಮಾಡುವುದಾಗಿ ಕೆಆರ್‌ಎಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ್ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಗುರುವಾರ ಮಾತನಾಡಿದರು.

‘ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸೋಮಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಅವರು ಎರಡು ಗ್ರಾಮ ಸಭೆ ನಡೆಸಿದ್ದಾರೆ. ಮೊದಲನೇ ಗ್ರಾಮಸಭೆಯು ಗ್ರಾಮಸ್ಥರ ಅಸಹಕಾರದಿಂದ ರದ್ದುಗೊಂಡಿತ್ತು. ಎರಡನೇ ಬಾರಿಗೆ ನಡೆದ ಗ್ರಾಮ ಸಭೆಯಲ್ಲಿ 81 ನಿವೇಶನಗಳ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಲಾಗಿದೆ. ಆದರೂ ಅಧಿಕಾರಿಗಳು ಹಕ್ಕುಪತ್ರ ಹಂಚಿಕೆ ಮಾಡಲು ವಿಳಂಬ ಮಾಡುತ್ತಿದ್ದಾರೆ. ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಹಕ್ಕುಪತ್ರ ಹಂಚಿಕೆ ಮಾಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ಕಾರ್ಯದರ್ಶಿ ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ್ ಪಾಟೀಲ್ ಬೇರಿಗಿ, ಮುಖಂಡರಾದ ನಾಗಪ್ಪ, ಮಲ್ಲಪ್ಪ, ಪರಶುರಾಮ, ರೇಣುಕಮ್ಮ, ನೀಲಮ್ಮ, ಮುನ್ನಿ, ಕಾಸಿಂಬಿ, ಅಂಬಮ್ಮ, ಹಂಪಮ್ಮ, ನಾಗಮ್ಮ, ಮಾರಮ್ಮ, ಚಂದ್ರಮ್ಮ, ಲಕ್ಷ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.