ADVERTISEMENT

ಮಸ್ಕಿ: ಆಟೊದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 5:10 IST
Last Updated 2 ಆಗಸ್ಟ್ 2024, 5:10 IST
   

ಮಸ್ಕಿ (ರಾಯಚೂರು ಜಿಲ್ಲೆ): ಪಟ್ಟಣದಲ್ಲಿ ಶುಕ್ರವಾರ ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ

ಪಟ್ಟಣದ ಸಂತೆ ಬಜಾರ ರಸ್ತೆಯಲ್ಲಿನ ಮನೆಯೊಂದರ ಮಹಿಳೆಗೆ ಬೆಳಿಗ್ಗೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ತಕ್ಷಣ ಆಟೊ ಕರೆಸಿದ್ದಾರೆ. ಮಹಿಳೆಯನ್ನು ಆಟೊದಲ್ಲಿ ಕೂರಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ನೋವು ಹೆಚ್ಚಾಗಿದೆ. ಹೀಗಾಗಿ ಚಾಲಕ ತಕ್ಷಣ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ.

ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಥರು ಆಟೊ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.