ADVERTISEMENT

ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಿ: ನ್ಯಾ.ಮಾರುತಿ ಬಾಗಡೆ ಸಲಹೆ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ನ್ಯಾ.ಮಾರುತಿ ಬಾಗಡೆ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2022, 12:46 IST
Last Updated 12 ಅಕ್ಟೋಬರ್ 2022, 12:46 IST
ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2022ರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮಾರುತಿ ಬಾಗಡೆ ಉದ್ಘಾಟಿಸಿದರು.
ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2022ರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮಾರುತಿ ಬಾಗಡೆ ಉದ್ಘಾಟಿಸಿದರು.   

ರಾಯಚೂರು: ಯುವ ಜನತೆ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮಾರುತಿ ಬಾಗಡೆ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್, ನವೋದಯ ಮಹಾವಿದ್ಯಾಲಯ, ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆಯಿಂದ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2022ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಇತರರೊಂದಿಗೆ ಹೋಲಿಕೆ ಮಾಡಿ ಬದುಕು ನಡೆಸಲು ಪ್ರಯತ್ನಿಸಿ ವಿಫಲರಾಗಿ ಒತ್ತಡ, ಭಯ, ಖಿನ್ನತೆಗೆ ಒಳಗಾಗಿ ಮಾನಸಿಕ ಕಾಯಿಲೆಗೆ ತುತ್ತಾಗುತ್ತಿದ್ದೇವೆ. ಅತಿಯಾದ ಮೊಬೈಲ್ ಬಳಕೆ ಮಾಡಬೇಡಿ ಎಂದರು.

ADVERTISEMENT

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಹಿರಿಯ ಅಧಿಕಾರಿ ಡಾ.ಮನೋಹರ ಪತ್ತಾರ ಮಾತನಾಡಿ, ಮಾನಸಿಕ ಕಾಯಿಲೆಯ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ನೆರವು ಪಡೆದುಕೊಂಡು ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ದಯಾನಂದ ಬೇಲೂರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಕಾರಾಗೃಹ ಅಧೀಕ್ಷಕ ಬಿ.ಆರ್.ಅಂದಾನಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ.ಯಶೋಧರ ಎನ್. ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.