ಚನ್ನಪಟ್ಟಣ (ರಾಮನಗರ): ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯದ ಸಮರ್ಪಕ ನಿರ್ವಹಣೆಗಾಗಿ, ತಾಲ್ಲೂಕಿನ ವಂದಾರಗುಪ್ಪೆಯಲ್ಲಿ ಜಿಲ್ಲಾ ಪಂಚಾಯಿತಿಯಿಂದ ನಿರ್ಮಿಸಿರುವ ಮೆಟೀರಿಯಲ್ ರಿಕವರಿ ಫೆಸಿಲಿಟಿ (ಎಂಆರ್‌ಎಫ್) ಘಟಕದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಟನ್ ಗಟ್ಟಲೆ ವಿಂಗಡಿತ ಪ್ಲಾಸ್ಟಿಕ್ ಹಾಗೂ ಒಣ ತ್ಯಾಜ್ಯವಿದ್ದ ಘಟಕದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ, ಇಡೀ ಘಟಕವನ್ನು ವ್ಯಾಪಿಸಿದೆ. ಆಗ ಘಟಕದಲ್ಲಿ ಕಾರ್ಮಿಕರು ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಬಂದಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಶಾರ್ಟ್ ಸರ್ಕೀಟ್ ನಿಂದ ಅಥವಾ ಯಾವ ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿತು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.