ADVERTISEMENT

ರಾಮನಗರ | ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2023, 4:05 IST
Last Updated 14 ಅಕ್ಟೋಬರ್ 2023, 4:05 IST
<div class="paragraphs"><p>ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ</p></div>

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತ

   

ರಾಮನಗರ: ನಗರದ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಒಮ್ನಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ‌ಇಬ್ಬರು ಮೃತಪಟ್ಟಿದ್ದಾರೆ.

ಪೀಣ್ಯದ ರಾಜು ಮತ್ತು ಉಮಾ ಮೃತರು.

ADVERTISEMENT

ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟಿದ್ದ ಕಾರು, ಮುಂದಿನ ಲಾರಿಯನ್ನು‌ ಹಿಂದಿಕ್ಕುವ ಭರದಲ್ಲಿ‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ರಾಮನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.