ADVERTISEMENT

ಯೋಗ ದಿನಾಚರಣೆ: ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 6:32 IST
Last Updated 12 ಜೂನ್ 2024, 6:32 IST
ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ರಾಮನಗರ: ‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21ರಂದು ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕೊಠಡಿಯಲ್ಲಿ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಯೋಗಪ್ರಿಯರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಕ್ಕಳು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಬಂದೋಬಸ್ತ್, ಬೆಳಗಿನ ಉಪಾಹಾರದ ವ್ಯವಸ್ಥೆ ಕಲ್ಪಿಸಬೇಕು. ತುರ್ತು ಸಂದರ್ಭಕ್ಕಾಗಿ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಆರೋಗ್ಯ ತಪಸಣಾ ಕೇಂದ್ರ ತೆರೆಯಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

ಸಭೆಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಪದ್ಮಶ್ರೀ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.