ADVERTISEMENT

ಮತ ಎಣಿಕೆ: ಲೋಪವಾಗದಂತೆ ಎಚ್ಚರಿಕೆ ವಹಿಸಿ; ಜಿಲ್ಲಾ ಚುನಾವಣಾಧಿಕಾರಿ

ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸಭೆ

​ಪ್ರಜಾವಾಣಿ ವಾರ್ತೆ
Published 22 ಮೇ 2024, 5:12 IST
Last Updated 22 ಮೇ 2024, 5:12 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಏಣಿಕೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ  ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಮಾತನಾಡಿದರು
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಏಣಿಕೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ  ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಮಾತನಾಡಿದರು   

ರಾಮನಗರ: ‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಏಣಿಕೆಯು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 4ರಂದು ಜರುಗಲಿದೆ. ಎಣಿಕೆ ಕಾರ್ಯ ನಡೆಯುವಾಗ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮತ ಏಣಿಕೆ ಕಾರ್ಯದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮತ ಎಣಿಕೆ ಕಾರ್ಯ ನಿಮಿತ್ತ ಯಾವುದೇ ವ್ಯಕ್ತಿ/ರಾಜಕೀಯ ಪಕ್ಷದ ಪ್ರತಿನಿಧಿಗಳು ಮತ್ತು ಏಜೆಂಟರ್‌ಗಳು ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಿಂದ ಮೊಬೈಲ್ ಪೋನ್ ತರುವುದನ್ನು ಅಥವಾ ಬಳಸುವುದನ್ನು ನಿಷೇಧಿಸಲಾಗಿದೆ. ಏಣಿಕೆ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಂಬಂಧಪಟ್ಟ ಬೆಸ್ಕಾಂ ಇಲಾಖೆಯವರು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಕೇಂದ್ರದ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಅಗ್ನಿಶಾಮಕ ದಳ ನಿಯೋಜನೆಗೆ ಕ್ರಮ ಕೈಗೊಳ್ಳಬೇಕು. ವಿವಿಧ ರಾಜಕೀಯ ಪಕ್ಷಗಳ ಏಜೆಂಟರುಗಳಿಗೆ ಮತ್ತು ಮತ ಏಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗುರುತಿನ ಚೀಟಿಯನ್ನು ವಿತರಿಸಬೇಕು. ಅಗತ್ಯ ಇರುವೆಡೆ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನಿಯೋಜಿಸಬೇಕು’ ಎಂದು ಸೂಚನೆ ನೀಡಿದರು.

‘ಆರೋಗ್ಯ ಇಲಾಖೆಯವರು ನುರಿತ ವೈದ್ಯರ ತಂಡ, 2 ಆಂಬುಲೆನ್ಸ್ ಹಾಗೂ ಅಗತ್ಯ ಸಿಬ್ಬಂದಿಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಬೇಕು. ಚುನಾವಣಾ ಸಿಬ್ಬಂದಿಗೆ ಉಪಹಾರ, ಊಟ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಬೇಕು’ ಎಂದರು.

ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.