ADVERTISEMENT

ರಾಮನಗರ | ವಾಹನ ಡಿಕ್ಕಿ: ಕರಡಿ ಸಾವು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 4:11 IST
Last Updated 1 ಫೆಬ್ರುವರಿ 2024, 4:11 IST
ರಾಮನಗರ ತಾಲ್ಲೂಕಿನ ಗೊಲ್ಲರದೊಡ್ಡಿ ಬಳಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಕರಡಿ
ರಾಮನಗರ ತಾಲ್ಲೂಕಿನ ಗೊಲ್ಲರದೊಡ್ಡಿ ಬಳಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಕರಡಿ   

ರಾಮನಗರ: ತಾಲ್ಲೂಕಿನ ತಾಲ್ಲೂಕಿನ ಗೊಲ್ಲರದೊಡ್ಡಿ ಬಳಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ವಾಹನವೊಂದು ಡಿಕ್ಕಿ ಹೊಡೆದು ಹತ್ತು ವರ್ಷದ ಕರಡಿಯೊಂದು ಮೃತಪಟ್ಟಿದೆ.

ದೊಡ್ಡಮಣ್ಣುಗುಡ್ಡೆ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಬಂದಿರುವ ಕರಡಿ ಬೆಳಗ್ಗೆ ರಸ್ತೆ ದಾಟುವಾಗ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕರಡಿಯ ಬಾಯಿ, ಮುಖ ಮತ್ತು ದೇಹದ ಕೆಲ ಭಾಗಗಳು ಛಿದ್ರವಾಗಿವೆ. ಘಟನೆ ಬಳಿಕ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು. ಕರಡಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ, ಯಂಗಯ್ಯನ ಕೆರೆ ಪ್ರದೇಶದಲ್ಲಿ ಶವ ಸುಡಲಾಯಿತು. ವಲಯ ಅರಣ್ಯಾಧಿಕಾರಿ ದಿನೇಶ್, ಉಪ ವಲಯ ಅರಣ್ಯಾಧಿಕಾರಿ ವಾಸು ಇದ್ದರು.

ADVERTISEMENT

ಯಶಸ್ವಿನಿ: ವಾರದೊಳಗೆ ಆಸ್ಪತ್ರೆಗೆ ಬಿಲ್ ಪಾವತಿಬೆಂಗಳೂರು: ‘ಯಶಸ್ವಿನಿ’ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್‌ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.ಈ ಹಿಂದೆ ಸುಮಾರು ₹25 ಕೋಟಿಯಷ್ಟು ಬಾಕಿ ಉಳಿದಿತ್ತು. ಇದರಿಂದ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಈಗ ಆ ಸಮಸ್ಯೆ ನಿವಾರಿಸಲಾಗಿದೆ. ರೋಗಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.ಅಲ್ಲದೇ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್‌ ದರಕ್ಕೆ ಸರಿಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು ಇದಕ್ಕೆ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿವೆ. ರಾಜ್ಯ ಸರ್ಕಾರ 15–20 ವರ್ಷಗಳಷ್ಟು ಹಿಂದೆ ದರ ನಿಗದಿ ಮಾಡಿತ್ತು. ದರವು ತುಂಬಾ ಕಡಿಮೆ ಇತ್ತು. ದರ ಪರಿಷ್ಕರಿಸುವಂತೆ ಖಾಸಗಿ ಆಸ್ಪತ್ರೆಗಳೂ ಒತ್ತಾಯ ಮಾಡಿದ್ದವು ಎಂದು ರಾಜಣ್ಣ ಹೇಳಿದರು.ಈ ಹಿಂದೆ ಯಶಸ್ವಿನಿ ಯೋಜನೆಯನ್ನು ನಿಲ್ಲಿಸಿದ ನಂತರ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಹಣ ಪಾವತಿ ಮಾಡಿರಲಿಲ್ಲ. ಇದರಿಂದ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಕೆಲವು ಆಸ್ಪತ್ರೆಗಳು ಹಿಂದೇಟು ಹಾಕಿದ್ದವು. ಈಗ ಆ ಸಮಸ್ಯೆ ಪರಿಹಾರವಾಗಿದ್ದು ರಾಜ್ಯದ ಎಲ್ಲೆಡೆ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಜನರಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.