ರಾಮನಗರ ತಾಲ್ಲೂಕಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ಬೆಂಗಳೂರು–ಮೈಸೂರು ಸಂಪರ್ಕಿಸುವ ರಾಷ್ಟ್ರಿಯ ಹೆದ್ದಾರಿಯ ಸರ್ವೀಸ್ ರಸ್ತೆಯು ಜಲಾವೃತಗೊಂಡಿದ್ದು, ವಾಹನಗಳ ಸವಾರರು ಪರದಾಡಿದರು. ಸಂಜೆ 5ರ ಸುಮಾರಿಗೆ ಆರಂಭವಾದ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಹೊರವಲಯದ ಹೆದ್ದಾರಿಯ ಕೆಂಪನಹಳ್ಳಿ ಗೇಟ್‌ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿಯ ರಸ್ತೆ ಕೆಳ ಸೇತುವೆಗಳಲ್ಲಿ ಭಾರೀ ಪ್ರಮಾಣದ ನೀರು ಸಂಗ್ರಹಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.