ADVERTISEMENT

ಸಿ.ಎಂ ವಿರುದ್ಧ ತನಿಖೆ: ಕಾಲವೇ ಉತ್ತರ ನೀಡಲಿದೆ– ಸಂಸದ ಡಾ.ಸಿ.ಎನ್.ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 4:25 IST
Last Updated 19 ಆಗಸ್ಟ್ 2024, 4:25 IST
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್
ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್   

ರಾಮನಗರ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಒಪ್ಪಿಗೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪತ್ರಿಕ್ರಿಯಿಸಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ’ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದರು.

ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಚಾರದ ಬಗ್ಗೆ ತನಿಖೆ ನಡೆಸಲು ಕಾನೂನು ವ್ಯವಸ್ಥೆ ಇದೆ. ಏನಾಗುತ್ತೋ ಕಾದು ನೋಡೊಣ. ಕಾಲವೇ ಇದಕ್ಕೆ ಉತ್ತರ ನೀಡಲಿದೆ’ ಎಂದರು.

‘ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಮಸ್ಯೆ ಬಗ್ಗೆ ಸಂಸತ್‌ನಲ್ಲಿ ಚರ್ಚೆ ನಡೆಸಿದ್ದೇನೆ. ಬೆಂಗಳೂರು ಹೊರವಲಯದಲ್ಲಿ ಎಸ್.ಟಿ.ಆರ್.ಆರ್. ರಿಂಗ್ ರೋಡ್ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಭೂಸ್ವಾಧೀನಕ್ಕೆ ₹2,110ಕೋಟಿ ಹಣ ಅವಶ್ಯ ಇದೆ. ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ವಿವರಿಸಲಾಗಿದೆ. ಕೇಂದ್ರ ಸರ್ಕಾರದ ಪಾಲು ₹1,410 ಕೋಟಿ ಬಿಡುಗಡೆ ಮಾಡುವುದಾಗಿ ಭರವಸೆ ಸಿಕ್ಕಿದೆ’ ಎಂದರು.

ADVERTISEMENT

ಎಸ್.ಟಿ.ಆರ್.ಆರ್.ರಿಂಗ್ ರೋಡ್ ಕಾಮಗಾರಿ ನಡೆದರೆ ಹಾರೋಹಳ್ಳಿ, ಕನಕಪುರ, ಮಾಗಡಿ, ಆನೇಕಲ್ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ತೆಂಗು ಬೆಳೆಗಾರರ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಕನಕಪುರ ಭಾಗದಲ್ಲಿ ಆನೆದಾಳಿ ಹೆಚ್ಚಾಗಿದೆ. ಆನೆದಾಳಿ ಹೆಚ್ಚಿರುವ ಭಾಗದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಕೇಂದ್ರ ಸ್ಪಂದಿಸುವ ಭರವಸೆ ನೀಡಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.