ಬೆಂಗಳೂರು: ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಹುಲುವಾಡಿ ದೇವರಾಜ್ ಮತ್ತು ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಬಿ. ಸುರೇಶ್‌ಗೌಡ ಅವರನ್ನು ನೇಮಿಸಲಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಸಂಬಂಧ ಸೋಮವಾರ ಆದೇಶ ಹೊರಡಿಸಿದ್ದಾರೆ.
ರಾಮನಗರ ಜಿಲ್ಲೆಯ ಅಧ್ಯಕ್ಷರಾಗಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದ ರುದ್ರೇಶ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರು. ಆದರೆ, ಎಲ್ಲ ಜಿಲ್ಲೆಗಳಲ್ಲೂ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬದಲಿಸುವ ಹಿನ್ನೆಲೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.