ADVERTISEMENT

ನಿಖಿಲ್ ರೋಡ್‌ ಷೋನಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಬಸ್ ಮಾಲೀಕರಿಗೆ ನೋಟಿಸ್

ಚನ್ನಪಟ್ಟಣ ಉಪ ಚುನಾವಣೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 9:21 IST
Last Updated 26 ಅಕ್ಟೋಬರ್ 2024, 9:21 IST
<div class="paragraphs"><p>ನಿಖಿಲ್ ರೋಡ್‌ ಷೋನಲ್ಲಿ ನೀತಿ ಸಂಹಿತೆ ಉಲ್ಲಂಘನೆ</p></div>

ನಿಖಿಲ್ ರೋಡ್‌ ಷೋನಲ್ಲಿ ನೀತಿ ಸಂಹಿತೆ ಉಲ್ಲಂಘನೆ

   

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆಯ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್‌ ಷೋ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ, ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಚುನಾವಣಾ ಅಧಿಕಾರಿಗಳು ಆಯೋಜಕರಿಗೆ ನೋಟಿಸ್ ನೀಡಿದ್ದಾರೆ.

ರೋಡ್‌ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು ಖಾಸಗಿ 96 ಬಸ್‌ಗಳಲ್ಲಿ ಜನರನ್ನು ಕರೆತರಲಾಗಿತ್ತು. ಈ ಕುರಿತು ಪರಿಶೀಲನೆ ನಡೆಸಿದಾಗ ಬಸ್‌ಗಳಿಗೆ ಅನುಮತಿ ಪಡೆಯದಿರುವುದು ಕಂಡುಬಂತು. ಹಾಗಾಗಿ, ಆಯೋಜಕರು ಹಾಗೂ ಬಸ್‌ಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಕುರಿತು ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್‌ ಕೂಡ ಮಾಡಿಕೊಳ್ಳಲಾಗಿದೆ. ಇಂದು ನ್ಯಾಯಾಲಯದ ಅನುಮತಿ ಪಡೆದು, ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.