ADVERTISEMENT

ಚನ್ನಪಟ್ಟಣ: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 5:29 IST
Last Updated 21 ಜೂನ್ 2024, 5:29 IST
ಚನ್ನಪಟ್ಟಣದ ಗಾಂಧಿಭವನದ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಚನ್ನಪಟ್ಟಣದ ಗಾಂಧಿಭವನದ ವೃತ್ತದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.   

ಚನ್ನಪಟ್ಟಣ: ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮತ್ತು ರಾಜ್ಯದಲ್ಲಿ ಕಾನೂನು ಹದಗೆಟ್ಟಿರುವುದನ್ನು ಖಂಡಿಸಿ ಜೆಡಿಎಸ್ ಹಾಗೂ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ನಗರದ ಗಾಂಧಿಭವನ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರವು ಕಳೆದ ಕೆಲವು ತಿಂಗಳುಗಳಲ್ಲಿ ಮೂರು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಿತ್ತು. ಆದರೆ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುವುದರ ಮೂಲಕ ಜನಸಾಮಾನ್ಯರಿಗೆ ತೊಂದರೆ ನೀಡುತ್ತಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿರುವ ಜನಸಾಮಾನ್ಯರು ತೈಲ ಬೆಲೆ ಏರಿಕೆಯಿಂದ ಮತ್ತಷ್ಟು ಕಷ್ಟ ಅನುಭವಿಸುವಂತಾಗಿದೆ. ರಾಜ್ಯ ಸರ್ಕಾರವು ಕೂಡಲೇ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.

ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಡೆದ ಪ್ರತಿಭಟನೆಯಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ADVERTISEMENT

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ. ಜಯಮುತ್ತು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ತೂಬಿನಕೆರೆ ರಾಜು, ನಗರ ಘಟಕದ ಅಧ್ಯಕ್ಷ ಶಿವು, ಮುಖಂಡರಾದ ಕೆಲಗೆರೆ ಜಯರಾಂ, ಶಿವಲಿಂಗಯ್ಯ, ನಿಸರ್ಗ ಲೋಕೇಶ್, ರಂಗಸ್ವಾಮಿ, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.