ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಶಾರದಾ ಚಂದ್ರಶೇಖರ್
ರಾಮನಗರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಮನಗರ ಚನ್ನಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಶಾರದಾ ಚಂದ್ರಶೇಖರ್ ಅವರು ಮಂಗಳವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು.
ಜೊತೆಗೆ ತಾಲ್ಲೂಕಿನ ಬೈರಶೆಟ್ಟಿಹಳ್ಳಿ ಗ್ರಾಮದ ಪ್ರಮುಖ ಮುಖಂಡರು ಹಾಗೂ ಯುವಕರು ಸಹ ಕಾಂಗ್ರೆಸ್ ತೊರೆದು, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷವನ್ನು ಸೇರ್ಪಡೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.