ADVERTISEMENT

ಮಾದಕ ವಸ್ತು ವಿರೋಧಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 4:55 IST
Last Updated 9 ಜುಲೈ 2024, 4:55 IST
ಚನ್ನಪಟ್ಟಣದ ತಾಲ್ಲೂಕಿನ ಇಗ್ಗಲೂರಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರವಿಚಂದ್ರ, ಇತರರು ಹಾಜರಿದ್ದರು
ಚನ್ನಪಟ್ಟಣದ ತಾಲ್ಲೂಕಿನ ಇಗ್ಗಲೂರಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರವಿಚಂದ್ರ, ಇತರರು ಹಾಜರಿದ್ದರು   

ಚನ್ನಪಟ್ಟಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೋಗಾಲ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲ್ಲೂಕಿನ ಇಗ್ಗಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಮಾದಕ ವಸ್ತು ವಿರೋಧಿ ದಿನಾಚರಣೆ ಹಮ್ಮಿಕೊಂಡಿತು.

ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ದೇಶದ ಬೆನ್ನೆಲುಬು ಆಗಿರುವ ಯುವಕರು ಮಾದಕ ವಸ್ತುಗಳಿಂದ ದಾರಿ ತಪ್ಪುತ್ತಿರುವುದು ದುರಂತದ ಸಂಗತಿ. ಈ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ಬಿದ್ದವರ ಸಂಖ್ಯೆ ಅಪಾರ. ವಿದ್ಯಾರ್ಥಿಗಳು ಇದರಿಂದ ದೂರು ವಿದ್ದು,  ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ರವಿಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಯೋಜನೆಯ ಚನ್ನಪಟ್ಟಣ ವಲಯದ ಅಧಿಕಾರಿ ರೇಷ್ಮಾ, ಸೋಗಾಲ ವಲಯದ ಮೇಲ್ವಿಚಾರಕಿ ಭಾಗ್ಯ, ಇಗ್ಗಲೂರು ವಲಯದ ಒಕ್ಕೂಟ ಅಧ್ಯಕ್ಷ ನಾಗರಾಜು, ಸೇವಾ ಪ್ರತಿನಿಧಿ ಛಾಯಾಕುಮಾರಿ, ಉಪನ್ಯಾಸಕರಾದ ಚಂದ್ರಕಲಾ, ಅಂಬುಜಾ, ಮಹದೇವಸ್ವಾಮಿ, ಶಿವನಂಜೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.