ADVERTISEMENT

ಚನ್ನಪಟ್ಟಣ: ತಗಚಗೆರೆಯಲ್ಲಿ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 25 ಮೇ 2024, 5:30 IST
Last Updated 25 ಮೇ 2024, 5:30 IST
ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆಯ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆಯ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆಯಿತು   

ಚನ್ನಪಟ್ಟಣ: ನಗರದ ಚಂದ್ರು ಡಯಗ್ನೋಸ್ಟಿಕ್ ಸೆಂಟರ್, ದೃಷ್ಟಿ ಆಸ್ಪತ್ರೆ, ಎಂ.ಆರ್.ಐ. ಸ್ಕ್ಯಾನಿಂಗ್ ಸೆಂಟರ್, ಜೀವಾಮೃತ ರಕ್ತನಿಧಿ ಕೇಂದ್ರ ಹಾಗೂ ತಗಚಗೆರೆ ಎಂಪಿಸಿಎಸ್ ಆಶ್ರಯದಲ್ಲಿ ತಾಲ್ಲೂಕಿನ ತಗಚಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶುಕ್ರವಾರ ಉಚಿತ ಆರೋಗ್ಯ ಶಿಬಿರ ನಡೆಯಿತು.

ಆರೋಗ್ಯ ಶಿಬಿರದಲ್ಲಿ ಮೆಧುಮೇಹ, ರಕ್ತದೊತ್ತಡ, ಕಣ್ಣಿಗೆ ಸಂಬಂಧಿಸಿದಂತೆ 200ಕ್ಕೂ ಹೆಚ್ಚು ಮಂದಿ ತಪಾಸಣೆಗೊಳಗಾದರು.

ಶಿಬಿರಕ್ಕೆ ಚಾಲನೆ ನೀಡಿದ ಚಂದ್ರು ಡಯಗ್ನೋಸ್ಟಿಕ್ ಸೆಂಟರ್ ಆರೋಗ್ಯ ರಕ್ಷಕ ಪಾರ್ಥಸಾರಥಿ, ಈಚೆನ ದಿನಗಳಲ್ಲಿ ಜನಸಾಮಾನ್ಯರ ಆರೋಗ್ಯದಲ್ಲಿ ಏರುಪೇರು ಆಗುವುದು ಸಾಮಾನ್ಯವಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದ ಜನರ ಆರೋಗ್ಯ ದೃಷ್ಟಿಯಿಂದ ಶಿಬಿರ ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರು ಇಂತಹ ಶಿಬಿರವನ್ನು ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಗ್ರಾಮದ ಪ್ರದೀಪ್, ದೇವರಾಜು, ಚಂದ್ರು ಡಯಗ್ನೋಸ್ಟಿಕ್ ಸೆಂಟರ್‌ನ ಗಂಗಾಧರ್, ಅನಿಲ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.