ADVERTISEMENT

ಜೈಲರ್ ಇಮಾಮ್ ಖಾಸೀಂಗೆ ಮುಖ್ಯಮಂತ್ರಿ ಪದಕ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:25 IST
Last Updated 11 ಜುಲೈ 2024, 14:25 IST
ರಾಮನಗರ ಜಿಲ್ಲಾ ಕಾರಾಗೃಹದ ಜೈಲರ್ ಇಮಾಮ್ ಖಾಸೀಂ ಅವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು 2023ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು
ರಾಮನಗರ ಜಿಲ್ಲಾ ಕಾರಾಗೃಹದ ಜೈಲರ್ ಇಮಾಮ್ ಖಾಸೀಂ ಅವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು 2023ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು   

ರಾಮನಗರ: ಅತ್ಯುತ್ತಮ ಸೇವೆಗಾಗಿ ಜಿಲ್ಲಾ ಕಾರಾಗೃಹದ ಜೈಲರ್ ಇಮಾಮ್ ಖಾಸೀಂ ಅವರು 2023ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಮಾಮ್ ಅವರಿಗೆ ಪದಕ ಪ್ರದಾನ ಮಾಡಿದರು.

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪೂರ ಗ್ರಾಮದವರಾದ ಇಮಾಮ್, 2018ರಲ್ಲಿ ಜೈಲರ್ ಆಗಿ ಸೇವೆಗೆ ಸೇರಿದರು. ಮಂಗಳೂರು ಹಾಗೂ ಸುರಪುರದಲ್ಲಿ ಕಾರ್ಯನಿರ್ವಹಿಸಿರುವ ಅವರು, ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಒಂದೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪದಕ ಪ್ರದಾನ ಸಮಾರಂಭದಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.