ADVERTISEMENT

ಜೆಡಿಎಸ್‌ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ನಿಖಿಲ್‌ ನಾಮಪತ್ರ ಮೆರವಣಿಗೆ: ಠಾಣೆಗೆ ಚುನಾವಣಾ ಅಧಿಕಾರಿ ದೂರು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 16:21 IST
Last Updated 26 ಅಕ್ಟೋಬರ್ 2024, 16:21 IST
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ ಬಸ್‌ಗಳು 
ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ ಬಸ್‌ಗಳು    

ಚನ್ನಪಟ್ಟಣ (ರಾಮನಗರ): ಉಪ ಚುನಾವಣೆ ಜೆಡಿಎಸ್‌ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಡೆದ ರೋಡ್‌ ಷೋದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಗಂಭೀರವಲ್ಲದ ಅಪರಾಧ ಪ್ರಕರಣ (ಎನ್‌ಸಿಆರ್) ದಾಖಲಾಗಿದೆ.

ಅನುಮತಿ ಪಡೆಯದೆ ರೋಡ್‌ ಷೋ ಕಾರ್ಯಕ್ರಮಕ್ಕೆ ವಿವಿಧ ಭಾಗಗಳಿಂದ ಸುಮಾರು 96 ಖಾಸಗಿ ಬಸ್‌ಗಳಲ್ಲಿ ಜನರನ್ನು ಕರೆತರಲಾಗಿತ್ತು. ಹಾಗಾಗಿ, ಆಯೋಜಕರು ಹಾಗೂ ಬಸ್‌ಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಜೊತೆಗೆ ಪೊಲಿಸ್ ಠಾಣೆಗೂ ದೂರು ಕೊಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ ಕುರಿತು ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಎನ್‌ಸಿಆರ್ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಯೋಗೇಶ್ವರ್ ಕಾರು ತಪಾಸಣೆ: ತಾಲ್ಲೂಕಿನ ತಿಟ್ಟಮಾರನಹಳ್ಳಿಯಲ್ಲಿ ಶನಿವಾರ ನಡೆಯುತ್ತಿದ್ದ ಕಾಂಗ್ರೆಸ್ ಸಮನ್ವಯ ಸಭೆಯ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು, ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಕಾರನ್ನು ತಪಾಸಣೆ ಮಾಡಿದರು.

ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿಯಲ್ಲಿ ಶನಿವಾರ ನಡೆದ ಕಾಂಗ್ರೆಸ್ ಸಮನ್ವಯ ಸಭೆ ವೇಳೆ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಕಾರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.