ADVERTISEMENT

ಕಾಂಗ್ರೆಸ್ ಹಿಂದುಳಿದ ವರ್ಗಗಳ ಬೆನ್ನಿಗೆ ನಿಂತಿದೆ: ಮಂಕಾಳ ವೈದ್ಯ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 5:49 IST
Last Updated 6 ನವೆಂಬರ್ 2024, 5:49 IST
ಚನ್ನಪಟ್ಟಣದಲ್ಲಿ ಗಂಗಾಮತಸ್ಥ ಸಮುದಾಯದ ಸಭೆಯಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಕೆಪಿಸಿಸಿ ಮೀನುಗಾರಿಕೆ ವಿಭಾಗದ ತಾಲ್ಲೂಕು ಅಧ್ಯಕ್ಷ ರಮೇಶ್ ಸೋಗಾಲ ಇತರರು ಭಾಗವಹಿಸಿದ್ದರು
ಚನ್ನಪಟ್ಟಣದಲ್ಲಿ ಗಂಗಾಮತಸ್ಥ ಸಮುದಾಯದ ಸಭೆಯಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಕೆಪಿಸಿಸಿ ಮೀನುಗಾರಿಕೆ ವಿಭಾಗದ ತಾಲ್ಲೂಕು ಅಧ್ಯಕ್ಷ ರಮೇಶ್ ಸೋಗಾಲ ಇತರರು ಭಾಗವಹಿಸಿದ್ದರು   

ಚನ್ನಪಟ್ಟಣ: ‘ಹಿಂದುಳಿದ ವರ್ಗಗಳ ಬೆನ್ನಿಗೆ ನಿಂತಿರುವ ಕಾಂಗ್ರೆಸ್ ಪಕ್ಷವನ್ನು ತಾಲ್ಲೂಕಿನ ಗಂಗಾಮತಸ್ಥ ಸಮುದಾಯ ಬೆಂಬಲಿಸಬೇಕು’ ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಗಂಗಾಮತಸ್ಥ ಸಮುದಾಯದ ಸಭೆ ನಡೆಸಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಈ ಸಮುದಾಯ ಹಿಂದಿನಿಂದಲೂ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದೆ. ಈ ಬಾರಿ ಸಿ.ಪಿ.ಯೋಗೇಶ್ವರ್ ಅವರನ್ನು ಬೆಂಬಲಿಸಬೇಕು. ಕ್ಷೇತ್ರದಲ್ಲಿ ಸಮುದಾಯದ 17 ಸಾವಿರಕ್ಕೂ ಹೆಚ್ಚು ಮತಗಳಿದ್ದು, ಸಮುದಾಯವು ಕಾಂಗ್ರೆಸ್ ಅನ್ನು ಬೆಂಬಲಿಸುವ ಮೂಲಕ ಸರ್ಕಾರಕ್ಕೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.

‘ಗಂಗಾಮತ ಸಮುದಾಯವನ್ನು ಎಸ್.ಟಿ. ವರ್ಗಕ್ಕೆ ಸೇರ್ಪಡೆ ಮಾಡಬೇಕು ಎನ್ನುವ ವಿಚಾರ ಹಲವು ವರ್ಷಗಳಿಂದಲೂ ಇದೆ. ಆ ಬೇಡಿಕೆಯನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲು ಬದ್ಧವಾಗಿದೆ. ಈಗಾಗಲೇ ಸರ್ಕಾರವು ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಆ ಮೂಲಕ ಅನುದಾನ ನೀಡುತ್ತಿದ್ದಾರೆ. ಗಂಗಾ ಮತಸ್ಥ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ’ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಕೆಪಿಸಿಸಿ ಮೀನುಗಾರಿಕೆ ವಿಭಾಗದ ತಾಲ್ಲೂಕು ಅಧ್ಯಕ್ಷ ರಮೇಶ್ ಸೋಗಾಲ, ಮುಖಂಡರಾದ ಪವಿತ್ರ ಪ್ರಭಾಕರರೆಡ್ಡಿ, ನಿವೃತ್ತ ಶಿಕ್ಷಕ ರಾಮು, ಮುನಿಯಪ್ಪನದೊಡ್ಡಿ ಶಿವಣ್ಣ, ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.