ADVERTISEMENT

ಮಾಗಡಿ: ಸಂವಿಧಾನ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 5:55 IST
Last Updated 9 ಫೆಬ್ರುವರಿ 2024, 5:55 IST
ಮಾಗಡಿ ತಾಲ್ಲೂಕಿನ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಸ್ವಾಗತ ಕೋರಿದ ಪಿಡಿಒ ಉಮೇಶ್‌ ನಾಯ್ಕ್‌, ಪ್ರಬಂಧ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು
ಮಾಗಡಿ ತಾಲ್ಲೂಕಿನ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಸ್ತಬ್ಧ ಚಿತ್ರಕ್ಕೆ ಸ್ವಾಗತ ಕೋರಿದ ಪಿಡಿಒ ಉಮೇಶ್‌ ನಾಯ್ಕ್‌, ಪ್ರಬಂಧ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು    

ಮಾಗಡಿ: ತಾಲ್ಲೂಕಿನ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿ ತಲುಪಿದ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಗ್ರಾ.ಪಂ.ಅಧ್ಯಕ್ಷ ಶಿವಕುಮಾರ್‌ ಹಾಗೂ ಸದಸ್ಯರು ಸ್ವಾಗತ ಕೋರಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಾಡಬಾಳ್‌ ಜಯರಾಮ್‌ ಮಾತನಾಡಿ, ಭಾರತದ ಸಂವಿಧಾನ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ವಿಶೇಷವಾಗಿ ಅಧ್ಯಯನ ನಡೆಸಬೇಕು. ಸಂವಿಧಾನ ಸಮಾಜದ ಎಲ್ಲರಿಗೂ ಅವಕಾಶ ನೀಡಿದೆ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಂದನಾ, ಪಿಡಿಒ ಉಮೇಶ್‌ ನಾಯ್ಕ್‌, ಕಾರ್ಯದರ್ಶಿ ಕೆ.ವೇಣುಗೋಪಾಲ್‌, ಗ್ರಾಮ ಲೆಕ್ಕಾಧಿಕಾರಿ ಕಲ್ಪನಾ ಸಂವಿಧಾನ ಜಾಗೃತಿ ಜಾಥಾ ಬಗ್ಗೆ ಮಾತನಾಡಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.