ADVERTISEMENT

ಕಮಿಷನ್‌ಗಾಗಿ ಸಿ.ಪಿ ಯೋಗೇಶ್ವರ್ ಪಕ್ಷಾಂತರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2024, 6:17 IST
Last Updated 9 ನವೆಂಬರ್ 2024, 6:17 IST
ಚನ್ನಪಟ್ಟಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು
ಚನ್ನಪಟ್ಟಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು   

ಚನ್ನಪಟ್ಟಣ: ‘ಸಿ.ಪಿ. ಯೋಗೇಶ್ವರ್ ಖಾಲಿ ಕೈಯಲ್ಲಿ ಬಿಜೆಪಿಗೆ ಬಂದರು, ಅವರ ಚುನಾವಣೆಗೆ ಬಿಜೆಪಿ ಹಣ ಖರ್ಚು ಮಾಡಿತು. ಸೋತಾಗ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತು. ಆದರೂ ಅವರು ಪಕ್ಷ ಬಿಟ್ಟರು. ಅಧಿಕಾರದಲ್ಲಿರುವ ಪಕ್ಷಕ್ಕೆ ಹೋಗುವುದು ಅವರ ಚಾಳಿ. ಯೋಗೇಶ್ವರ್ ಪಕ್ಷಾಂತರ ಮಾಡಿರುವುದು ಕಮಿಷನ್ ಹೊಡೆಯಲು’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇರ ಆರೋಪ ಮಾಡಿದರು.

ಶುಕ್ರವಾರ ಪತ್ರಿಕಾಗೋಷ್ಠಿಮಾತನಾಡಿದ ಅವರು, ಯೋಗೇಶ್ವರ್ ಅವರು ಭ್ರಷ್ಟಾಚಾರದ ಕೆಲಸ. ಯಾವ ಯಾವ ಸರ್ಕಾರ ಅಧಿಕಾರದಲ್ಲಿರುತ್ತದೊ ಅಲ್ಲಿಗೆ ಸೇರುವುದು ಅವರ ಕೆಟ್ಟ ಬುದ್ದಿ ಎಂದು ಲೇವಡಿ ಮಾಡಿದರು.

ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟಾಗಿ ಮತ ಯಾಚನೆ ಮಾಡಿ ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಬಿಚ್ಚಿಡಬೇಕು. ನಮ್ಮ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ADVERTISEMENT

 ಕಳೆದ ಒಂದೂವರೆ ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರಿ ನೌಕರರಿಗೆ ವೇತನ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ಕಮೀಷನ್ ಎಲ್ಲೆ ಮೀರಿದೆ ಎಂದು ಆರೋಪಿಸಿದರು.

ಎಚ್.ಡಿ. ಕುಮಾರಸ್ವಾಮಿ ಅವರನ್ನು ಮೋದಿ ಅವರು ತಮ್ಮ ಕ್ಯಾಬಿನೆಟ್ ನಲ್ಲಿನಿರಬೇಕು ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಇದು ನಮಗೆ ಹೆಮ್ಮೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಗೆಲುವು ಸಾಧಿಸುವುದು ಖಚಿತ. ಆ ಮೂಲಕ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.