ADVERTISEMENT

ಚನ್ನಪಟ್ಟಣದಲ್ಲಿ ಜನಸ್ಪಂದನ ಸಭೆ: ಅಹವಾಲು ಸ್ವೀಕರಿಸಿದ ಡಿಸಿಎಂ ಡಿಕೆಶಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 9:05 IST
Last Updated 24 ಜೂನ್ 2024, 9:05 IST
   

ಚನ್ನಪಟ್ಟಣ (ರಾಮನಗರ): ತಾಲ್ಲೂಕಿನ ಕೋಡಂಬಳ್ಳಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿ ಸ್ವತಃ ಅರ್ಜಿಗಳನ್ನು ಸಹ ಸ್ವೀಕರಿಸಿದರು.

‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಧ್ಯೇಯವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ನೂರಾರು ಸಾರ್ವಜನಿಕರು ತಮ್ಮ ಅಹವಾಲು ಅರ್ಜಿಗಳೊಂದಿಗೆ ಭಾಗವಹಿಸಿದ್ದರು. ನಾ ಮುಂದು, ತಾ ಮುಂದು ಎಂದು ಸರದಿಯಲ್ಲಿ ನಿಂತು, ತಮ್ಮ ಸಮಸ್ಯೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.