ADVERTISEMENT

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 14:35 IST
Last Updated 3 ಅಕ್ಟೋಬರ್ 2024, 14:35 IST

ಬಿಡದಿ: ಪಟ್ಟಣದ ಚೌಕಿಮಠದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಗುರುವಾರ ಪತ್ತೆಯಾಗಿದೆ.

ಚೌಕಿಮಠದ ನಿರ್ಜನ ಪ್ರದೇಶದಲ್ಲಿ ಸುಮಾರು 60 ರಿಂದ 65 ವರ್ಷ ವಯಸ್ಸಿನ ವ್ಯಕ್ತಿಯ ದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಮೃತರ ಹೆಸರು ಹಾಗೂ ವಿಳಾಸ ಪತ್ತೆಯಾಗಿಲ್ಲ. ಹಾಗಾಗಿ ಮೃತರ ವಾರಸುದಾರರು ಯಾರಾದರೂ ಇದ್ದರೆ ಬಿಡದಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT