ದೊಡ್ಡಬಳ್ಳಾಪುರ: ತಾಲ್ಲೂಕಿನ ಕಾಡನೂರು ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಕ್ಷೌರ ಮಾಡಲು ನಿರಾಕರಿಸಿದ ಕ್ಷೌರದ ಅಂಗಡಿಗಳಿಗೆ ಭಾನುವಾರ ಮುತ್ತಿಗೆ ಹಾಕಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಕ್ಷೌರ ಮಾಡಿಸಿಕೊಂಡರು.
ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿಷೇಧ ಹೇರಿ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ರಾಮುನೇರಳೆಘಟ್ಟ ಹೇಳಿದರು.
ಪ್ರಜಾಪ್ರಭುತ್ವದಲ್ಲೂ ಅಸ್ಪೃಶ್ಯತೆಯ ಭೂತ ಇನ್ನೂ ಜೀವಂತವಾಗಿರುವುದು ವಿಪರ್ಯಾಸ. ಮಾನವೀಯತೆ ಮರೆತು ಮೇಲು,ಕೀಳು ಎಂಬ ಭಾವನೆಯಲ್ಲಿ ಜೀವನ ಸಾಗಿಸುತ್ತಿರುವ ಮೌಢ್ಯ ಸಮಾಜ ಇನ್ನಾದರೂ ಬದಲಾಗಬೇಕಿದೆ ಎಂದರು.
ಸಂಘಟನೆಯ ಜಿಲ್ಲಾ ಸಂಚಾಲಕ ಎಂ.ಪಿ.ಗಂಗಾಧರ್, ಜಿಲ್ಲಾ ಘಟಕದ ದೊಡ್ಡಯ್ಯ, ನರೇಂದ್ರ ಮೂರ್ತಿ, ಸಕ್ಕರೆ ಗೊಲ್ಲಹಳ್ಳಿ ಆನಂದ್, ಕುಮಾರ್ ದೊಡ್ಡಬೆಳವಂಗಲ,ಶಂಕರಮೂರ್ತಿ, ನಾಗರತ್ನಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.