ADVERTISEMENT

ಗುಣಮಟ್ಟದ ಶಿಕ್ಷಣದ ಪ್ರವರ್ತಕ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 6:31 IST
Last Updated 28 ಜೂನ್ 2024, 6:31 IST
ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪೂಜೆ ಸಲ್ಲಿಸಿದರು
ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪೂಜೆ ಸಲ್ಲಿಸಿದರು   

ಮಾಗಡಿ: ನಾಡಪ್ರಭು ಕೆಂಪೇಗೌಡರು 500 ವರ್ಷಗಳ ಹಿಂದೆಯೇ ಗುರುಕುಲ ಪದ್ಧತಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದರು. ಅದೇ ಮಾದರಿಯಲ್ಲಿ ಮಾಗಡಿಯಲ್ಲೂ ಗುಣಮಟ್ಟದ ಶಿಕ್ಷಣ ದೊರೆಯಬೇಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದರು.

ತಾಲ್ಲೂಕಿನ ಕೆಂಪಾಪುರದಲ್ಲಿ ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ  ಅವರ ಸಮಾಧಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ತಾಲ್ಲೂಕಿನ ಸಂಕಿಘಟ್ಟ ಗ್ರಾಮದಲ್ಲಿ ಪಂಚಾಯಿತಿಗೊಂದು ಮಾದರಿ ಶಾಲೆಯನ್ನು ಆರಂಭಿಸಲಾಗಿದೆ. ಜಿಟಿಟಿಸಿ ಕಾಲೇಜು, ರಾಜ್ಯದಲ್ಲೇ ಮಾದರಿಯಾಗುವಂತಹ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗಿದೆ. ಮಾಗಡಿ ತಾಲೂಕಿನಲ್ಲಿ ಶೇ 1ರಷ್ಟು ಮಾತ್ರ ನೀರಾವರಿ ಇದೆ. ಸತ್ತೇಗಾಲ ನೀರಾವರಿ ಕಾಮಗಾರಿಯ ಪೈಪ್ ಅಳವಡಿಸಲು ವಿರೋಧಿಗಳು ಸಾಕಷ್ಟು ತೊಂದರೆ ನೀಡಿದ್ದರೂ ಸಹ ನೀರು ಹರಿಸಿದ್ದೇವೆ ಎಂದರು.

ADVERTISEMENT

ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 11 ವರ್ಷ ಸಂಸದರಾಗಿದ್ದರೂ ಸಹ ಅವರ ಅಭಿವೃದ್ಧಿ ಶೂನ್ಯ. ನಾನು ಸಚಿವರಾಗಿದ್ದ ಸಮಯದಲ್ಲಿ ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇನೆ. ಎಕ್ಸ್‌ಪ್ರೆಸ್ ಕೆನಾಲ್ ಮಾಡುವುದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.

 ಬಿಜೆಪಿ ಮುಖಂಡ ಪ್ರಸಾದ್ ಗೌಡ, ಚಿಕ್ಕಕಲ್ಯಾಯ ಶ್ರೀಧರ್, ಜಿಲ್ಲಾ ಪ್ರಾಧಾನ ಕಾರ್ಯರ್ಶಿ ರಾಘವೇಂದ್ರ, ದೊಡ್ಡಿ ರಾಜೇಶ್, ಶಿವರಾಮಯ್ಯ, ಕಲ್ಕೆರೆ ಉಮೇಶ್, ನಟರಾಜ್, ಹುಳ್ಳೇನಹಳ್ಳಿ ಮಂಜುನಾಥ್, ಬಿಡದಿ ಆನಂದ್, ವನಿತಾ, ಬಾನಂದೂರು ಪ್ರಸನ್ನ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.