ಕನಕಪುರ: ಕಾಡಾನೆ ದಾಳಿಯಿಂದ ಮೃತಪಟ್ಟ ಗಟ್ಟಿಗುಂದ ಗ್ರಾಮದ ರೈತ ಸುರೇಶ ಅವರ ಮನೆಗೆ ಸಂಸದ ಡಾ.ಸಿ.ಎನ್. ಮಂಜುನಾಥ್ ಗುರುವಾರ ಭೇಟಿ ನೀಡಿ ಸಾಂತ್ವನ ಹೇಳಿದರು.
‘ಮನುಷ್ಯರ ಮೇಲೆ ದಾಳಿ ಮಾಡಿ, ಇಬ್ಬರು ರೈತರ ಸಾವಿಗೆ ಕಾರಣವಾಗಿರುವ ಆನೆಯನ್ನು ಕೂಡಲೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು’ ಎಂದು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.