ADVERTISEMENT

ಮಾಗಡಿ ಅಭಿವೃದ್ಧಿಗೆ ಒತ್ತು: ಪುರಸಭೆ ಅಧ್ಯಕ್ಷೆ ರಮ್ಯ ನರಸಿಂಹಮೂರ್ತಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 4:52 IST
Last Updated 22 ನವೆಂಬರ್ 2024, 4:52 IST
ಮಾಗಡಿ ಜ್ಯೋತಿನಗರ ವಾರ್ಡ್‌ನಲ್ಲಿ ಕಾಂಕ್ರೀಟ್ ರಸ್ತೆ ಹಾಕುವ ಹಿನ್ನೆಲೆಯಲ್ಲಿ ಪುರಸಭೆ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಅಂದಾಜು ಪಟ್ಟಿ ಸಿದ್ಧ‍ಪಡಿಸಿದರು
ಮಾಗಡಿ ಜ್ಯೋತಿನಗರ ವಾರ್ಡ್‌ನಲ್ಲಿ ಕಾಂಕ್ರೀಟ್ ರಸ್ತೆ ಹಾಕುವ ಹಿನ್ನೆಲೆಯಲ್ಲಿ ಪುರಸಭೆ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಅಂದಾಜು ಪಟ್ಟಿ ಸಿದ್ಧ‍ಪಡಿಸಿದರು   

ಮಾಗಡಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಬದ್ಧ. ಎಲ್ಲ ವಾರ್ಡ್‌ಗಳಿಗೂ ಮೂಲ ಸೌಲಭ್ಯ ಒದಗಿಸವ ಕೆಲಸ ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ಪುರಸಭೆ ಅಧ್ಯಕ್ಷೆ ರಮ್ಯ ನರಸಿಂಹಮೂರ್ತಿ ಹೇಳಿದರು.

ಪಟ್ಟಣದಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹4.5ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಜ್ಯೋತಿನಗರ ವಾರ್ಡ್‌ಗೆ ಭೇಟಿ ನೀಡಿ ಮಾತನಾಡಿದರು.

ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಈಗಾಗಲೇ ಮುಖ್ಯಮಂತ್ರಿ ವಿಶೇಷ ಅನುದಾನದಡಿ ₹25ಕೋಟಿ ಅನುದಾನ ತಂದಿದ್ದಾರೆ. ಮಾಗಡಿ ಪುರಸಭೆ ವ್ಯಾಪ್ತಿಯಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿಗೆ ₹4.5ಕೋಟಿ ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಅಗತ್ಯವಾಗಿ ಬೇಕಾಗಿರುವ ವಾರ್ಡ್‌ಗಳಿಗೆ ಕಾಂಕ್ರೀಟ್ ರಸ್ತೆ, ಚರಂಡಿ ಮಾಡುವ ಕೆಲಸ ಆಗಲಿದ್ದು ಪಟ್ಟಣದ ಜ್ಯೋತಿನಗರದ ವಾರ್ಡ್‌ಗೆ ₹1.25ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ, ಚರಂಡಿ ಮಾಡಿಸಲಾಗುತ್ತಿದೆ ಎಂದರು.

ADVERTISEMENT

ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುವುದು. ಕೆಶಿಪ್ ಕಾಮಗಾರಿಗೂ ಚಾಲನೆ ನೀಡಲಾಗುವುದು ಎಂದರು.

ಪುರಸಭೆ ನಾಮಿನಿ ಸದಸ್ಯ ಆನಂದ್, ಪುರಸಭೆ ಎಂಜಿನಿಯರ್ ಪ್ರಶಾಂತ್, ಸಹಾಯಕ ಎಂಜಿನಿಯರ್ ಶೀಲಾ ಜೋಗೂರು, ಸಿಬ್ಬಂದಿ ದಿನೇಶ್, ಎಂಜಿಯರ್ ಮಹೇಶ್ ಸೇರಿದಂತೆ ಗುತ್ತಿಗೆದಾರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.