ರಾಮನಗರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಮನಗರ ಜಿಲ್ಲಾ ಶಾಖೆಯ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಯು ನ. 19ರಿಂದ ಡಿ. 4ವರೆಗೆ ಜರುಗಲಿದೆ.
ನ. 19ರಂದು 27ರವರೆಗೆ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ನಾಮಪತ್ರ ಸಲ್ಲಿಕೆ ಜರುಗಲಿದೆ. 28ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಂದೇ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಣೆಯಾಗಲಿದೆ. 29ರಂದು ಸಂಜೆ 4.30ರೊಳಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆಯಬಹುದಾಗಿದೆ.
ಡಿ. 4ರಂದು ನಗರದ ಮಿನಿ ವಿಧಾನಸೌಧದ ಹಿಂಭಾಗದಲ್ಲಿರುವ ಸ್ಫೂರ್ತಿ ಭವನದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ವರೆಗೆ ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ಕೂಡ ಜರುಗಲಿದ್ದು, ಫಲಿತಾಂಶವೂ ಹೊರಬೀಳಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.