ರಾಮನಗರ; ತಾಲ್ಲೂಕಿನ ಬಿಡದಿ ಹೋಬಳಿಯ ಜೋಗರದೊಡ್ಡಿಯಲ್ಲಿ ಸೋಮವಾರ 'ರಚ್ಚು ಐ ಲವ್ ಯೂ' ಸಿನಿಮಾ ಚಿತ್ರೀಕರಣದ ವೇಳೆ ವಿದ್ಯುತ್ ಸ್ಪರ್ಶಿಸಿ ಫೈಟರ್ ವಿವೇಕ್ಎಂಬುವರು ಮೃತಪಟ್ಟರು.
ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಚಿತ್ರದ ಚಿತ್ರೀಕರಣ ಇಲ್ಲಿ ನಡೆದಿತ್ತು. ವೈಯರ್ ಎಳೆಯುವ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಸಿಬ್ಬಂದಿ ಗಾಯಗೊಂಡರು. ಅದರಲ್ಲಿ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟರು.
ಘಟನೆ ಬಳಿಕ ಚಿತ್ರೀಕರಣ ಸ್ಥಗಿತಗೊಂಡಿದೆ. ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕ್ರೇನ್ ಬಳಸಿ ಚಿತ್ರೀಕರಣ ನಡೆದಿತ್ತು. ಈ ವೇಳೆ ಕ್ರೇನ್ ಗೆ 11 ಕೆ.ವಿ. ಸಾಮರ್ಥ್ಯ ದ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿತು. ಘಟನೆ ಸಂದರ್ಭ ನಟ ಅಜಯ್ ರಾವ್ ಸ್ಥಳದಲ್ಲಿದ್ದರು. ನಾಯಕಿ ರಚಿತಾ ರಾಮ್ ಇರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.