ADVERTISEMENT

ಕರ್ನಾಟಕ ಪಶುವೈದ್ಯಕೀಯ ವಿ.ವಿ ಘಟಿಕೋತ್ಸವ: ರಾಮನಗರದ ಹೇಮಶ್ರೀಗೆ 3 ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 7:03 IST
Last Updated 31 ಅಕ್ಟೋಬರ್ 2023, 7:03 IST
<div class="paragraphs"><p>ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ&nbsp; ಘಟಿಕೋತ್ಸವದಲ್ಲಿ, ರಾಮನಗರದ ಹೇಮಶ್ರೀ ಗೌಡ ಅವರಿಗೆ&nbsp;ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು 3 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು</p></div>

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ  ಘಟಿಕೋತ್ಸವದಲ್ಲಿ, ರಾಮನಗರದ ಹೇಮಶ್ರೀ ಗೌಡ ಅವರಿಗೆ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು 3 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು

   

ರಾಮನಗರ: ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 13ನೇ ಘಟಿಕೋತ್ಸವದಲ್ಲಿ, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಬಿ.ಎಫ್‌.ಎಸ್ಸಿ ಪದವಿಯಲ್ಲಿ 2021–22ನೇ ಸಾಲಿನಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ರಾಮನಗರದ ಹೇಮಶ್ರೀ ಗೌಡ ಅವರು 3 ಚಿನ್ನದ ಪದಕಗಳನ್ನು ತಮ್ಮ ಕೊರಳಿಗೇರಿಸಿಕೊಂಡಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರು ಪದವಿ ಪ್ರಮಾಣಪತ್ರದೊಂದಿಗೆ ಚಿನ್ನದ ಪದಕಗಳನ್ನು ಹೇಮಶ್ರೀ ಅವರಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ವಿ.ವಿ ಕುಲಪತಿ ಪ್ರೊ. ಕೆ.ಸಿ. ವೀರಣ್ಣ ಹಾಗೂ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾ ನಿರ್ದೇಶಕ ಡಾ. ಆರ್‌.ಸಿ. ಅಗರವಾಲ್ ಇದ್ದರು.

ADVERTISEMENT

ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಎಂ.ಎಫ್‌.ಎಸ್ಸಿ ಓದುತ್ತಿರುವ ಹೇಮಶ್ರೀ ಗೌಡ ಅವರು, ರಾಮನಗರದ ನಿವೃತ್ತ ಪ್ರಾಂಶುಪಾಲ ಎಸ್.ಎಲ್. ವನರಾಜು ಮತ್ತು ಎನ್‌.ಪಿ. ಶಶಿಕಲಾ ಅವರ ಪುತ್ರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.