ADVERTISEMENT

ಕಾಡಾನೆ ಓಡಿಸುವ ಕಾರ್ಯಾಚರಣೆ: ಸ್ಥಳಕ್ಕೆ ಡಿ.ಸಿ. ಭೇಟಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 4:27 IST
Last Updated 10 ಜೂನ್ 2024, 4:27 IST
ಕನಕಪುರ ಹಲಸಿನ ಮರದೊಡ್ಡಿ ಗ್ರಾಮದಲ್ಲಿ ಕಾಡಾನೆಗಳನ್ನು ಓಡಿಸುವ ಸಾಕಿದ ಆನೆಗಳ ಶಿಬಿರಕ್ಕೆ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌‌ ರಾಜೇಂದ್ರನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಕನಕಪುರ ಹಲಸಿನ ಮರದೊಡ್ಡಿ ಗ್ರಾಮದಲ್ಲಿ ಕಾಡಾನೆಗಳನ್ನು ಓಡಿಸುವ ಸಾಕಿದ ಆನೆಗಳ ಶಿಬಿರಕ್ಕೆ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌‌ ರಾಜೇಂದ್ರನ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಕನಕಪುರ: ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌ ರಾಜೇಂದ್ರನ್‌ ಶನಿವಾರ ಭೇಟಿ ನೀಡಿ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದರು.

ಕಬ್ಬಾಳು ಅರಣ್ಯ ಪ್ರದೇಶದ ಹಲಸಿನಮರದ ದೊಡ್ಡಿ ಗ್ರಾಮದಲ್ಲಿಏಳು ಸಾಕಿದ ಆನೆಗಳ ಸಹಾಯದಿಂದ ಕಾಡಾನೆಗಳನ್ನು ಮುತ್ತತ್ತಿ ವನ್ಯಜೀವಿ ಅರಣ್ಯ ಪ್ರದೇಶಕ್ಕೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದೆ.

ದುಬಾರೆ ಆನೆ ಶಿಬಿರದಿಂದ ಏಳು ಸಾಕಾನೆಗಳೊಂದಿಗೆ ನುರಿತ ಮಾವುತರ ತಂಡ ಈ ಕಾರ್ಯಾಚರಣೆಗೆ ಬಂದಿದೆ. ಕಳೆದ 10 ದಿನಗಳಿಂದ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಕಾವೇರಿ ವನ್ಯಜೀವಿ ಧಾಮಕ್ಕೆ ಆನೆಗಳನ್ನು ಓಡಿಸುವಲ್ಲಿ ತಂಡ ಯಶಸ್ವಿಯಾಗುತ್ತಿದೆ.

ADVERTISEMENT

ಡಿಎಫ್‌ಒ ರಾಮಕೃಷ್ಣಪ್ಪ, ಎಸಿಎಫ್‌ ಗಣೇಶ್, ವಲಯ ಅರಣ್ಯ ಅಧಿಕಾರಿಗಳಾದ ಆಶಾ,ಕಿರಣ್ ಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿ, ಮಾವುತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.