ಬಿಡದಿ: ಪಟ್ಟಣದಲ್ಲಿ ಪ್ರತಿ ಮನೆಗೆ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಕಲ್ಪಿಸುವ ಪೈಪ್‌ಲೈನ್ ಕಾಮಗಾರಿಯು ಶೇ 60ರಷ್ಟು ಪೂರ್ಣಗೊಂಡಿದೆ. ಇನ್ನೂ ಒಂದೆರಡು ವಾರ್ಡ್‌ಗಳಲ್ಲಿ ಜೋಡಣೆ ಕಾರ್ಯ ಮುಗಿಯಬೇಕಿದೆ.
ನಾಗರಿಕರು ಈ ಜೋಡಣೆ ಕಾರ್ಯಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು, ಜೊತೆಗೆ ಸಂಪರ್ಕ ಒದಗಿಸುವ ಕಾರ್ಮಿಕರು ಕೂಡ ಉತ್ತಮವಾಗಿ ಸ್ಪಂದಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನೂ ಆರು ತಿಂಗಳೊಳಗೆ ಪ್ರತಿಯೊಂದು ಮನೆಗಳಿಗೂ ಗ್ಯಾಸ್ ಸಂಪರ್ಕ ಸಿದ್ಧವಾಗುತ್ತದೆ. ಪಟ್ಟಣದ 23 ವಾರ್ಡ್‌ಗಳಲ್ಲಿಯೂ ಕಾಮಗಾರಿ ಪ್ರಗತಿಯಲ್ಲಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ತ್ವರಿತವಾಗಿ ಪೂರ್ಣಗೊಳಿಸಬೇಕು ಎಂಬುದು ಜನರ ಒತ್ತಾಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.