ಕನಕಪುರ: ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಸಂಘದ ನಿರ್ದೇಶಕರ ಆಯ್ಕೆಗಾಗಿ ಸೋಮವಾರ ನಗರದ ಶಿಕ್ಷಕರ ಭವನ ಮತ್ತು ಸರ್ಕಾರಿ ನೌಕರರ ಭವನದಲ್ಲಿ ಚುನಾವಣೆ ನಡೆಯಿತು.
ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಸಂಘಕ್ಕೆ ಎಲ್ಲಾ ಇಲಾಖೆಗಳಿಂದ 27 ನಿರ್ದೇಶಕರ ಆಯ್ಕೆ ಮಾಡಬೇಕಿದ್ದು, ಅದರಲ್ಲಿ 19 ನಿರ್ದೇಶಕರ ಅವಿರೋಧವಾಗಿ ಆಯ್ಕೆಯಾಗಿದ್ದರು.
ಉಳಿದಂತೆ 8 ನಿರ್ದೇಶಕರನ್ನು 6 ಇಲಾಖೆಗಳಿಂದ ಆಯ್ಕೆ ಮಾಡಬೇಕಿದ್ದು ಅದಕ್ಕಾಗಿ ಸೋಮವಾರ ಚುನಾವಣೆ ನಡೆಯಿತು.
ಚುನಾವಣೆಯಲ್ಲಿ ಪಶುಪಾಲನಾ ಇಲಾಖೆಯಿಂದ ಡಾ.ಗಿರೀಶ್.ಎಸ್, ಪ್ರಾಥಮಿಕ ಶಿಕ್ಷಣ ಇಲಾಖೆಯಿಂದ ಚಂದ್ರಶೇಖರ್.ಎಚ್.ವಿ, ರಾಘವೇಂದ್ರಸ್ವಾಮಿ.ಎಸ್, ಶ್ರೀನಾಥ್.ಟಿ, ಪ್ರೌಢ ಶಿಕ್ಷಣ ಇಲಾಖೆಯಿಂದ ಪ್ರಸನ್ನ ಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ತಮ್ಮಣ್ಣ.ಕೆ, ಅರಣ್ಯ ಇಲಾಖೆಯಿಂದ ರಮೇಶ್.ಎಂ. ಯಂಕುಂಚಿ, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಶಿವಲಿಂಗೇಗೌಡ.ಎಚ್.ಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಚುನಾವಣೆಯು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಡೆಯಿತು. ನಾಲ್ಕು ಗಂಟೆ ನಂತರ ಮತ ಎಣಿಕೆ ಕಾರ್ಯವನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಯಿತು.
ರೇಷ್ಮೆ ಇಲಾಖೆ ನಿವೃತ್ತ ಅಧಿಕಾರಿ ಚಿಕ್ಕೆಂಪೇಗೌಡ ಚುನಾವಣಾ ಅಧಿಕಾರಿಯಾಗಿ, ಶಿಕ್ಷಣ ಇಲಾಖೆಯ ನಿವೃತ್ತ ಮುಖ್ಯ ಶಿಕ್ಷಕ ಸಿ.ಗಂಗಾಧರಯ್ಯ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.