ADVERTISEMENT

ಕೋರಂ ಇಲ್ಲದೆ ಸಭೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 5:06 IST
Last Updated 26 ಜೂನ್ 2024, 5:06 IST
ಮಾಗಡಿ ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯಸಭೆಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಕಾಮಗಾರಿ ಬಿಲ್ ಗಾಗಿ ಮಾತಿನ ಚಕಮಕಿ ನಡೆಯಿತು.
ಮಾಗಡಿ ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯಸಭೆಯಲ್ಲಿ ಸದಸ್ಯರು ಹಾಗೂ ಅಧಿಕಾರಿಗಳ ನಡುವೆ ಕಾಮಗಾರಿ ಬಿಲ್ ಗಾಗಿ ಮಾತಿನ ಚಕಮಕಿ ನಡೆಯಿತು.   

ಮಾಗಡಿ: ತಾಲ್ಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಸದಸ್ಯರ ಗೈರು ಹಿನ್ನೆಲೆಯಲ್ಲಿ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಪಿಡಿಒ ರಾಕೇಶ್ ತಿಳಿಸಿದ್ದಾರೆ.

ಒಟ್ಟು 16 ಜನ ಸದಸ್ಯರಿರುವ ಪಂಚಾಯಿತಿಯಲ್ಲಿ ಕೆಲಸ ಸದಸ್ಯರು ಸಭೆಗೆ ಬಾರದ ಹಿನ್ನೆಲೆಯಲ್ಲಿ ಕೋರಂ ಇಲ್ಲದೆ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಹಾಜರಾತಿ ಕಡಿಮೆ ಇರುವ ಕಾರಣ ಯಾವುದೇ ಕೆಲಸ ಮಾಡಲು ಬರುವುದಿಲ್ಲ. ಸರ್ಕಾರ ನರೇಗಾ ಯೋಜನೆ ಅಡಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಿ ಎಂದು ತಿಳಿಸಿದೆ. ಸಾರ್ವಜನಿಕರು ತಾವು ಮಾಡುವ ಕೆಲಸಗಳಿಗೆ ಮೊದಲೇ ಮಾಹಿತಿ ನೀಡಿ ನಮ್ಮಿಂದ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಿದರೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.

ADVERTISEMENT

ಗೊಂದಲ: ಪ್ರತಿ ಬಾರಿಯೂ ಕೋರಂ ಇಲ್ಲದೆ ಸಭೆಯನ್ನು ಮುಂದೂಡುತ್ತಾ ಬಂದಿದ್ದು ಸಾರ್ವಜನಿಕರ ಕೆಲಸ ಮಾತ್ರ ಆಗುತ್ತಿಲ್ಲ. ಸದಸ್ಯರ ಕಿತ್ತಾಟದಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ವರಲಕ್ಷ್ಮಮ್ಮ ಸೇರಿದಂತೆ ಏಳು ಸದಸ್ಯರು ಮಾತ್ರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.