ಕನಕಪುರ: ‘ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಹಡಪದ ಅಪ್ಪಣ್ಣನವರ ಸಮುದಾಯದ ಸವಿತಾ ಸಮಾಜಕ್ಕೆ ಸಾಮಾಜಿಕ ಸ್ಥಾನಮಾನಗಳು ಸಿಗಬೇಕು’ ಎಂದು ತಹಶೀಲ್ದಾರ್ ಶಿವಕುಮಾರ್ ತಿಳಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಭಾನುವಾರ ನಡೆದ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಮಾತನಾಡಿದರು.
ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ‘ಅಪ್ಪಣ್ಣನವರು ಸಮಾಜದ ಶೋಷಿತ ವರ್ಗಗಳನ್ನು ಮುಖ್ಯ ವಾಹಿನಿಗೆ ತರಲು ವಚನಗಳ ಮೂಲಕ ಕ್ರಾಂತಿಕಾರಿ ಹೋರಾಟ ನಡೆಸಿದರು. ಇಂದು ಅವರದೇ ಸಮಾಜಕ್ಕೆ ಮನ್ನಣೆ ಇಲ್ಲದಾಗಿದೆ’ ಎಂದರು.
ಪ್ರಗತಿಪರ ಸಂಘಟನೆಯ ಕುಮಾರಸ್ವಾಮಿ, ಮುಖಂಡ ನೀಲಿ ರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಯು.ಸಿ.ಕುಮಾರ್, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಯುವಶಕ್ತಿ ವೇದಿಕೆ ಶ್ರೀನಿವಾಸ್, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.