ಬಿಡದಿ: ಇಲ್ಲಿನ ಬಸ್ ನಿಲ್ದಾಣದ ಸಮೀಪದ ಚರಂಡಿ ಸ್ವಚ್ಛಗೊಳಿಸಿ ಸ್ಲ್ಯಾಬ್ ಅಳವಡಿಸಲಾಗಿದೆ.
ಬಸ್ ನಿಲ್ದಾಣದ ಬಳಿ ಚರಂಡಿಯಲ್ಲಿ ಮಣ್ಣು ತುಂಬಿ ಕೊಳಚೆ ನೀರು ಬೆಂಗಳೂರು- ಮೈಸೂರು ಹೆದ್ದಾರಿಯ ಮೇಲೆ ಹರಿದು ದ್ವಿಚಕ್ರ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಬಸ್ ನಿಲ್ದಾಣದ ಮುಂದೆ ತೆರದ ಚರಂಡಿ’ ಶೀರ್ಷಿಕೆಯಡಿ ಕಳೆದ ವಾರ ವರದಿ ಪ್ರಕಟಣೆಗೊಂಡಿತ್ತು.
ವರದಿ ಬಳಿಕ ಎಚ್ಚೆತ್ತ ಪುರಸಭೆ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸಿ, ಚರಂಡಿ ಮೇಲೆ ಸ್ಕ್ಯಾಬ್ ಅಳವಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.